ಸೋಮವಾರ, ಆಗಸ್ಟ್ 8, 2022
22 °C

ಕಾನ್‌ಸ್ಟೆಬಲ್‌ ಹುದ್ದೆ ನೇಮಕಾತಿ: ಶೇ 10 ಮೀಸಲು

ಪ್ರಜಾವಾಣೀ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಯ ನೇರ ನೇಮಕಾತಿಯಲ್ಲಿ ಶೇ 10ರಷ್ಟು ಹುದ್ದೆಗಳನ್ನು ಸಶಸ್ತ್ರ ಮೀಸಲು ಪಡೆ (ಸಿಎಆರ್‌, ಡಿಎಆರ್‌), ಕೆಎಸ್‌ಆರ್‌ಪಿ ಮತ್ತು ಕರ್ನಾಟಕ ರಾಜ್ಯ ಕೈಗಾರಿಕೆ ಭದ್ರತಾ ಪಡೆಯಲ್ಲಿ (ಕೆಎಸ್‌ಐಎಸ್‌ಎಫ್‌) ಕರ್ತವ್ಯದಲ್ಲಿರುವವರಿಗೆ ಮೀಸಲಿಟ್ಟು 'ಕರ್ನಾಟಕ ರಾಜ್ಯ ಪೊಲೀಸ್‌ ಲಿಪಿಕ ಸೇವೆಗಳನ್ನು ಒಳಗೊಂಡ ನೇಮಕಾತಿ (ನಿಯಮ) ತಿದ್ದುಪಡಿ–2020’ರ ನಿಯಮದ ಗೆಜೆಟ್‌ ಪ್ರಕಟಣೆ ಹೊರಡಿಸಲಾಗಿದೆ.

ತಿದ್ದುಪಡಿ ನಿಯಮಗಳ ಪ್ರಕಾರ, ರಾಜ್ಯದಲ್ಲಿ ಪುರುಷ ಮತ್ತು ಮಹಿಳೆಯರು ಸೇರಿ ಒಟ್ಟು 36,261 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗಳಿವೆ. ಈ ಪೈಕಿ, ಶೇ 67.5 ಹುದ್ದೆಗಳಿಗೆ ಪುರುಷರು, ಶೇ 22.5 ಹುದ್ದೆಗಳಿಗೆ ಮಹಿಳೆಯರು, ಉಳಿದ ಶೇ 10ರಷ್ಟು ಹುದ್ದೆಗಳನ್ನು ಸಿಎಆರ್‌, ಡಿಎಆರ್, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್‌ ವೃಂದಗಳಲ್ಲಿ ಕರ್ತವ್ಯದಲ್ಲಿರುವವರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶೇ 10ರಲ್ಲಿ ಶೇ 7.5ರಷ್ಟು ಪುರುಷರಿಗೆ, ಶೇ 2.5ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು