ರಾಜರಾಜೇಶ್ವರಿನಗರ: ‘ಪಕ್ಷಕ್ಕಿಂತ ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿರುವುದರಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ನೊಂದಿಗೆ ಕೈಜೋಡಿಸಿದ್ದೇನೆ’ ಎಂದು ಯಶವಂತಪುರ ವಿಧಾನಸಭೆ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು

ತಾವರೆಕೆರೆ ಹೋಬಳಿಯ ದೊಡ್ಡ ಆಲದಮರ ಬಳಿ ನಡೆದ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜನರ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಲವು ಯೋಜನೆ ಮಂಜೂರು ಮಾಡಿ, ₹300 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದರು.

ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ ಮಾತನಾಡಿ, ‘ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರದ ಗ್ಯಾರಂಟಿ ಯೋಜನೆಗಳು, ಸವಲತ್ತುಗಳನ್ನು ನಿಜವಾದ ಪಲಾನುಭವಿಗಳನ್ನು ತಲುಪಿಸುವ ಮೂಲಕ ಸಂಘಟನೆ ಮಾಡಬೇಕು’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೇವಣ್ಣ ಸಿದ್ದಯ್ಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೋಹಿಣಿ ಸುರೇಶ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸಾವಿತ್ರಮ್ಮ, ಕೆಂಚನಪುರ ತಿಮ್ಮೇಗೌಡ, ನಾಗರಾಜು, ಸಾಕಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.