ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದವರೂ ಅಧಿಕಾರ ಅನುಭವಿಸಲು ಸಂವಿಧಾನ ಕಾರಣ: ರವಿಕುಮಾರ್‌

Published 6 ಡಿಸೆಂಬರ್ 2023, 16:11 IST
Last Updated 6 ಡಿಸೆಂಬರ್ 2023, 16:11 IST
ಅಕ್ಷರ ಗಾತ್ರ

ಯಲಹಂಕ: ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಮತದಾನ, ಹಕ್ಕು, ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ನೀಡದೇ ಹೋಗಿದ್ದರೆ ಇಂದು ಹಿಂದುಳಿದವರು ಯಾವುದೇ ಅಧಿಕಾರ ಮತ್ತು ಸ್ಥಾನಮಾನಗಳನ್ನು ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್‌ ಹೇಳಿದರು.

ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರಿನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಮುದಾಯ ಭವನ ಟ್ರಸ್ಟ್‌ ಆಶ್ರಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್‌ ಅವರ 67ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಅಮೃತಹಳ್ಳಿ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಅಂಬರೀಶ್‌, ಬಿಬಿಎಂಪಿ ಮಾಜಿ ಉಪಮೇಯರ್‌ ಎಂ. ಆನಂದ್‌, ಜಕ್ಕೂರು ಕ್ರೆಡಿಟ್‌ ಕೋ–ಆಪರೇಟಿವ್‌ ಸೊಸೈಟಿಯ ಉಪಾಧ್ಯಕ್ಷ ನಾಗರಾಜಪ್ಪ, ನಿರ್ದೇಶಕರಾದ ಬಿ.ಜಿ. ರಮೇಶ್‌, ಸುಮಿತ್ರಮ್ಮ, ಆಂಜಿನಪ್ಪ, ಕೃಷ್ಣಪ್ಪ, ದಲಿತ ಮುಖಂಡರಾದ ರಾಮಗೊಂಡನಹಳ್ಳಿ ರಮೇಶ್‌, ಸುಬ್ಬಣ್ಣ, ಎಸ್‌.ಸೋಮಶೇಖರ್‌, ಆವಲಹಳ್ಳಿ ಸುರೇಶ್‌, ಎಸ್‌. ಮಾರುತಿ, ತಿರುಮಳಪ್ಪ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT