ಗುರುವಾರ , ಜುಲೈ 29, 2021
23 °C

₹23 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನೂ ಮೂರು ಮೇಲ್ಸೇತುವೆ ಕಾಮಗಾರಿಗಳು ಶೀಘ್ರದಲ್ಲೇ ಆರಂಭವಾಗಲಿವೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ಉಪನಗರ ವಾರ್ಡ್‌ ವ್ಯಾಪ್ತಿಯ ಬಡಾವಣೆಗಳಲ್ಲಿ 2019-20ನೇ ಸಾಲಿನ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿಯಲ್ಲಿ ₹23 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಯಲಹಂಕ ಠಾಣೆ ವೃತ್ತದಿಂದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ವರೆಗೆ ಮತ್ತು ಸಂತೆವೃತ್ತದ ಮಾರ್ಗವಾಗಿ ಕೋಗಿಲು ವೃತ್ತದವರೆಗೆ ಹಾಗೂ ಎಂ.ಎಸ್.ಪಾಳ್ಯದಲ್ಲಿ ಮೇಲ್ಸೇತುವೆ ಕಾಮಗಾರಿಗಳು ಸದ್ಯದಲ್ಲೇ ಆರಂಭವಾಗಲಿವೆ ಎಂದರು.

ಬಿಬಿಎಂಪಿ ಸದಸ್ಯ ಎಂ.ಸತೀಶ್, ಮಾಜಿ ಸದಸ್ಯ ಎಂ.ಮುನಿರಾಜು, ಮುಖಂಡ ವೈ.ಜಿ.ವಸಂತ್ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು