ಬೆಂಗಳೂರು: ಕೋವಿಡ್ ಮೂರನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ 200 ಹಾಸಿಗೆಗಳ ಕೋವಿಡ್ ಚಿಕಿತ್ಸಾ ನಿರ್ಧಾರ ಕೇಂದ್ರವನ್ನು (ಟ್ರಯಾಜ್ ಸೆಂಟರ್) ನಿರ್ಮಿಸಲಾಗಿದ್ದು, ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಿದೆ.

ಎರಡನೇ ಅಲೆ ಕಾಣಿಸಿಕೊಂಡ ಬಳಿಕ ವಿಕ್ಟೋರಿಯಾ ಆಸ್ಪತ್ರೆ ಆವರಣ, ಕೆ.ಸಿ.ಜನರಲ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸಾ ನಿರ್ಧಾರ ಕೇಂದ್ರಗಳನ್ನು ನಿರ್ಮಿಸಲಾಗಿತ್ತು. ಮೂರನೇ ಅಲೆಯಲ್ಲಿ ಚಿಕಿತ್ಸೆಗೆ ಸಮಸ್ಯೆಯಾಗಬಾರದೆಂದು ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಕೂಡ ಈ ಕೇಂದ್ರವನ್ನು ನಿರ್ಮಿಸಲಾಗಿದ್ದು, ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ.

ಈ ಕೇಂದ್ರವು 36 ಐಸಿಯು ಹಾಸಿಗೆಗಳನ್ನು ಒಳಗೊಂಡಿದೆ. ವೈದ್ಯಕೀಯ ಆಮ್ಲಜನಕ ಸಂಪರ್ಕ ಹೊಂದಿರುವ ಹಾಸಿಗೆಗಳು, ಟ್ರಯಾಜ್ ಘಟಕ, ಸಿಬ್ಬಂದಿ ಕೊಠಡಿ, ಮಕ್ಕಳ ಚಿಕಿತ್ಸೆಗೆಗಾಗಿ ಪ್ರತ್ಯೇಕ ವಿಭಾಗ ಸಹ ಹೊಂದಿದೆ.

‘ಈ ಕೇಂದ್ರವು ಸೇವೆಗೆ ಬಹುತೇಕ ಸಿದ್ಧಗೊಂಡಿದೆ. ತೀವ್ರ ಉಸಿರಾಟದ ಸಮಸ್ಯೆ (ಸಾರಿ), ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಮತ್ತು ಕೊರೊನಾ ಸೋಂಕಿತರಿಗೆ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಕೇಂದ್ರವನ್ನು ಕ್ಷಯ ರೋಗಿಗಳ ಚಿಕಿತ್ಸೆಗೆ ಕೂಡ ಬಳಸಿಕೊಳ್ಳುವ ಯೋಜನೆಯಿದೆ’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.