ಮಂಗಳವಾರ, ಆಗಸ್ಟ್ 3, 2021
23 °C

ಬೆಳ್ಳಂದೂರು- ವರ್ತೂರು ಕೆರೆ ಏರಿ ನಿರ್ಮಾಣ: ಬಿಡಿಎ ಆಯುಕ್ತರಿಗೆ ಷೋಕಾಸ್ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳ ಬಫರ್ ವಲಯದಲ್ಲಿ 40 ಅಡಿ ಅಗಲದ ಬಂಡ್ (ಏರಿ) ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ಆದೇಶ ಪಾಲಿಸದ ಕಾರಣ ಬಿಡಿಎ ಆಯುಕ್ತರಿಗೆ ಷೋಕಾಸ್ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ವಕೀಲೆ ಗೀತಾ ಮಿಶ್ರಾ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ನಿಮ್ಮ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬಾರದು ಎಂಬ ಬಗ್ಗೆ ವಿವರಣೆ ನೀಡಿ’ ಎಂದು ಆಯುಕ್ತರಿಗೆ ತಾಕೀತು ಮಾಡಿದ ನ್ಯಾಯಪೀಠ, ವಿಚಾರಣೆಯಯನ್ನು ಇದೇ 28ಕ್ಕೆ ಮುಂದೂಡಿದೆ.

ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠವು, ‘ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳ ಮೇಲ್ವಿಚಾರಣೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್‌ಜಿಟಿ) ಈಗಾಗಲೇ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದೆ. ಆದ್ದರಿಂದ, ಈ ವಿಚಾರವಾಗಿ ಹೈಕೋರ್ಟ್‌ ಯಾವುದೇ ನಿರ್ದೇಶನ ನೀಡುವುದಿಲ್ಲ. ಆದರೆ, ಬಫರ್ ವಲಯದಲ್ಲಿ ಏರಿ ನಿರ್ಮಾಣ ಮಾಡುತ್ತಿರುವ ವಿಚಾರವನ್ನು ಈ ಸಮಿತಿಯ ಗಮನಕ್ಕೆ ತರಬೇಕು’ ಎಂದು ಆಯುಕ್ತರಿಗೆ ಸೂಚಿಸಿತ್ತು.

‘ಆಯುಕ್ತರು ಈ ಆದೇಶ‌ ಪಾಲನೆ ಮಾಡಿಲ್ಲ’ ಎಂಬುದನ್ನು ಗಮನಿಸಿದ ನ್ಯಾಯಪೀಠ, ಷೋಕಾಸ್ ನೋಟಿಸ್ ಜಾರಿಗೆ ಆದೇಶಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು