ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇವನಗೊಂದಿ, ಮದ್ದೂರು ನಿಲ್ದಾಣ: ರೈಲು ತಾತ್ಕಾಲಿಕ ನಿಲುಗಡೆ ಮುಂದುವರಿಕೆ

Published : 23 ಸೆಪ್ಟೆಂಬರ್ 2024, 15:57 IST
Last Updated : 23 ಸೆಪ್ಟೆಂಬರ್ 2024, 15:57 IST
ಫಾಲೋ ಮಾಡಿ
Comments

ಬೆಂಗಳೂರು: ಹೊಸಕೋಟೆ ಸಮೀಪದ ದೇವನಗೊಂದಿ ಮತ್ತು ಮಂಡ್ಯ ಜಿಲ್ಲೆಯ ಮದ್ದೂರು ನಿಲ್ದಾಣಗಳಲ್ಲಿ ಕೆಲವು ರೈಲುಗಳಿಗೆ ಇದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನೈರುತ್ಯ ರೈಲ್ವೆ ಮುಂದುವರಿಸಿದೆ.

ಕೆಎಸ್ಆರ್ ಬೆಂಗಳೂರು-ಮಾರಿಕುಪ್ಪಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು, ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ಎಕ್ಸ್‌ಪ್ರೆಸ್‌ ರೈಲುಗಳಿಗೆ ದೇವನಗೊಂದಿ ನಿಲ್ದಾಣದಲ್ಲಿ ಇರುವ ನಿಲುಗಡೆಯನ್ನು ಅಕ್ಟೋಬರ್‌ 1ರಿಂದ ಡಿಸೆಂಬರ್‌ 31ರವರೆಗೆ ಮುಂದುವರಿಸಲಾಗಿದೆ.

ಮೈಸೂರು-ಕೊಚುವೇಲಿ-ಮೈಸೂರು ಎಕ್ಸ್‌ಪ್ರೆಸ್‌ ರೈಲು, ಕಡಲೂರ್ ಪೋರ್ಟ್-ಮೈಸೂರು ಎಕ್ಸ್‌ಪ್ರೆಸ್‌ ರೈಲುಗಳಿಗೆ ಮದ್ದೂರು ನಿಲ್ದಾಣದಲ್ಲಿ ಒದಗಿಸಲಾಗಿರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅ.1ರಿಂದ 2025ರ ಮಾರ್ಚ್ 31ರವರೆಗೆ  ಮುಂದುವರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT