ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ಗುತ್ತಿಗೆ ನೌಕರ ಆತ್ಮಹತ್ಯೆ

Published 12 ಏಪ್ರಿಲ್ 2024, 16:02 IST
Last Updated 12 ಏಪ್ರಿಲ್ 2024, 16:02 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿಯೊಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಂಗೇರಿ ಉಪನಗರದ ನಿವಾಸಿ, ಕೆಪಿಟಿಸಿಎಲ್‌ ಗುತ್ತಿಗೆ ನೌಕರ ನವೀನ್‌ ಆತ್ಮಹತ್ಯೆ ಮಾಡಿಕೊಂಡವರು.

‘ಶುಕ್ರವಾರ ಬೆಳಿಗ್ಗೆ 8.30ರ ಸುಮಾರಿಗೆ ಕೆಲಸಕ್ಕೆಂದು ನವೀನ್ ಅವರು ಮನೆಯಿಂದ ಸ್ಕೂಟರ್‌ನಲ್ಲಿ ಹೊರಟಿದ್ದರು. ಸ್ಕೂಟರ್‌ ಅನ್ನು ನಾಯಂಡಹಳ್ಳಿ ಮೇಲ್ಸೇತುವೆಯಲ್ಲಿ ನಿಲ್ಲಿಸಿ, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ನವೀನ್‌ ಕಳೆದ ನವೆಂಬರ್‌ನಲ್ಲಿ ಮದುವೆಯಾಗಿದ್ದರು. ಮೂರು ತಿಂಗಳ ಹಿಂದಷ್ಟೇ ಅವರಿಗೆ ಕೆಪಿಟಿಸಿಎಲ್​​ನಲ್ಲಿ ಗುತ್ತಿಗೆ ಆಧಾರದ ಕೆಲಸ ಸಿಕ್ಕಿತ್ತು’ ಎಂದು ಮೂಲಗಳು ತಿಳಿಸಿವೆ.

‘ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ಧಾರೆಯೇ ಅಥವಾ ಕೆಲಸದ ಸ್ಥಳದಲ್ಲಿ ಬೇರೆ ಯಾವುದಾದರೂ ಸಮಸ್ಯೆ ಇತ್ತೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT