ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರೋಗ್ಯ, ಶಿಕ್ಷಣಕ್ಕೆ ಕ್ರೈಸ್ತರ ಕೊಡುಗೆ ಅಪಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸೇಂಟ್ ಮೇರೀಸ್ ಬೆಸಿಲಿಕಾ ಚರ್ಚ್ ವಾರ್ಷಿಕ ಉತ್ಸವ
Published : 8 ಸೆಪ್ಟೆಂಬರ್ 2024, 20:58 IST
Last Updated : 8 ಸೆಪ್ಟೆಂಬರ್ 2024, 20:58 IST
ಫಾಲೋ ಮಾಡಿ
Comments

ಬೆಂಗಳೂರು: ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಕ್ರೈಸ್ತ ಧರ್ಮೀಯ ಸಂಸ್ಥೆಗಳ ಮತ್ತು ಕ್ರೈಸ್ತ ಧರ್ಮಗುರುಗಳ ಕೊಡುಗೆ ಮಹತ್ತರವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿವಾಜಿನಗರದ ಐತಿಹಾಸಿಕ ಸೇಂಟ್ ಮೇರೀಸ್ ಬೆಸಿಲಿಕಾ ಚರ್ಚ್‌ನಲ್ಲಿ ಭಾನುವಾರ ನಡೆದ ಸಂತ ಮೇರಿ ಅಮ್ಮನ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೈಸ್ತ ಸಮುದಾಯದ ಸಾಮಾಜಿಕ ಕಾರ್ಯಗಳು ಎಲ್ಲರಿಗೂ ಮಾದರಿ. ಶಿವಾಜಿನಗರದ ಬೆಸಿಲಿಕಾ ಚರ್ಚ್‌ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲ ಜಾತಿಯ, ಎಲ್ಲ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದು ಬಣ್ಣಿಸಿದರು.

ಬೆಸಿಲಿಕಾ ಚರ್ಚ್‌ನ ಪುನರುಜ್ಜೀವನಕ್ಕೆ ₹ 5 ಕೋಟಿ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಕರ್ನಾಟಕವು ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ. ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ಗಟ್ಟಿಗೊಳಿಸಬೇಕು ಎಂದು ಆಶಿಸಿದರು.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಧರ್ಮಕ್ಷೇತ್ರದ ಆರ್ಚ್ ಬಿಷಪ್ ಪೀಟರ್ ಮಚಾಡೊ ಸಾನ್ನಿಧ್ಯ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT