ಬೆಂಗಳೂರು: ನಗರದಲ್ಲಿ ಹೆಚ್ಚಿರುವ ವಾಹನಗಳ ದಟ್ಟಣೆ ನಡುವೆಯೂ ಜನವರಿಯಲ್ಲಿ 26,351 ಆಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್. ರವಿಕಾಂತೇಗೌಡ, ‘ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಆಂಬುಲೆನ್ಸ್‌ಗಳ ಸಂಚಾರಕ್ಕೆ ವಿಶೇಷ ಒತ್ತು ನೀಡಲಾಗಿದೆ’ ಎಂದಿದ್ದಾರೆ.

‘ನಗರ ಬೆಳೆದಂತೆ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಪ್ರಮುಖ ರಸ್ತೆಗಳಲ್ಲಿ ವಿಪರೀತ ದಟ್ಟಣೆಯೂ ಆಗುತ್ತಿದೆ. ಎಲ್ಲ ವಾಹನಗಳ ಸಂಚಾರಕ್ಕೂ ಅನುಕೂಲ ಮಾಡಿಕೊಡುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ರಸ್ತೆಯಲ್ಲಿ ಆಂಬುಲೆನ್ಸ್‌ಗಳು ಕಂಡ ಕೂಡಲೇ ಪೊಲೀಸರು ತ್ವರಿತವಾಗಿ ದಾರಿ ಮಾಡಿಕೊಡುತ್ತಿದ್ದಾರೆ. ರೋಗಿಗಳನ್ನು ತುರ್ತಾಗಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಸಿಗುವಂತೆ ಮಾಡಿ, ಪ್ರಾಣವನ್ನೂ ರಕ್ಷಿಸುತ್ತಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.