ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಹಕಾರ ಸಂಘಗಳು ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಲಿ’

Last Updated 26 ಜೂನ್ 2019, 20:27 IST
ಅಕ್ಷರ ಗಾತ್ರ

ಯಲಹಂಕ: ಸಹಕಾರಿ ತತ್ವದಡಿಯಲ್ಲಿ ಹುಟ್ಟಿಕೊಂಡಿರುವ ಸಹಕಾರಿ ಸೊಸೈಟಿಗಳು ಸಾಮಾನ್ಯ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್‌ರಾಜ್ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಜನಸಮೃದ್ಧಿ ಸಮೂಹ ಸಂಸ್ಥೆ ಗಳ ಆಶ್ರಯದಲ್ಲಿ ಜಿಕೆವಿಕೆಯಲ್ಲಿ ಆಯೋಜಿಸಿದ್ದ ‘ಸಾಧನ ಸಂಭ್ರಮ’ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಶಿವಗಂಗಾ ಕ್ಷೇತ್ರದ ಮಲಯ ಶಾಂತ ಮುನಿ ದೇಶಿಕೇಂದ್ರ ಸ್ವಾಮೀಜಿ, ‘ತಮ್ಮ ಹಿತದ ಜೊತೆಗೆ ಸಮಾಜದ ಹಿತವನ್ನು ಬಯಸಿದರೆ ನಿಜವಾದ ಸಮೃದ್ಧ ಸಮಾಜ ನಿರ್ಮಾಣಕ್ಕೆ ದಾರಿಯಾಗುತ್ತದೆ. ಮನುಷ್ಯನಷ್ಟೇ ಅಲ್ಲದೆ ಜಗತ್ತಿನ ಸಕಲಪ್ರಾಣಿಗಳ ಲೇಸನ್ನು ಬಯಸುವುದೇ ನಿಜವಾದ ಮನುಜ ಲಕ್ಷಣ’ ಎಂದರು.

ರೆಡ್‌ಕ್ರಾಸ್‌ ಸೊಸೈಟಿ ಸಹಯೋಗ ದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ದಲ್ಲಿ 150 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಎಸ್ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಂಸ್ಥೆಯ ಸದಸ್ಯರೊಬ್ಬರ ಪುತ್ರಿ 4ನೇ ತರಗತಿಯ ಕೀರ್ತನಾ ಎಂಬಾಕೆಯ ಪದವಿಯವರೆಗೆ ತಗಲುವ ಶಿಕ್ಷಣದ ವೆಚ್ಚವನ್ನು ಭರಿಸಲು ಸಂಸ್ಥೆಯು ದತ್ತು ಪಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT