ಬೆಂಗಳೂರು: ಮಕ್ಕಳ ಹಕ್ಕುಗಳ ರಕ್ಷಣೆ, ಪೋಷಣಾ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳ ನಡುವೆ ಸಮನ್ವಯ ಅಗತ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪ್ರಭಾರ ಅಧ್ಯಕ್ಷ ಶಶಿಧರ್ ಕೋಸಂಬೆ ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗುರುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣೆಗಾಗಿ ಹಲವು ಕಾನೂನುಗಳಿದ್ದರೂ ಮಕ್ಕಳ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಹೆಚ್ಚಾಗುತ್ತಿವೆ. ಮಕ್ಕಳ ನ್ಯಾಯ (ಮಕ್ಕಳ ರಕ್ಷಣೆ ಮತ್ತು ಪೋಷಣೆ ಕಾಯ್ದೆ-2015), ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಮಕ್ಕಳ ರಕ್ಷಣಾ ನೀತಿ ಕುರಿತು ವಿದ್ಯಾರ್ಥಿಗಳಿಗೆ, ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಿದೆ. ಜಿಲ್ಲಾವಾರು ವ್ಯಾಪ್ತಿಯಲ್ಲಿ ಪ್ರತಿಯೊಬ್ಬ ಇಲಾಖಾ ಅಧಿಕಾರಿಗಳು ಮಕ್ಕಳ ಕಾನೂನು ಬದ್ಧ ಹಕ್ಕುಗಳನ್ನು ರಕ್ಷಣೆ ಮಾಡಬೇಕು ಎಂದರು.

ರಾಜ್ಯದ ಎಲ್ಲಾ ಶಾಲೆಗಳು, ವಸತಿ ನಿಲಯಗಳ ಮಕ್ಕಳಿಗೆ ಹಿಂಸೆ, ದೌರ್ಜನ್ಯ, ಶೋಷಣೆಯಿಂದ ರಕ್ಷಣೆ ಒದಗಿಸುವ ಮೂಲಕ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಶಾಲೆ ಮತ್ತು ವಸತಿನಿಲಯಗಳಲ್ಲಿ ಮಕ್ಕಳ ಹಕ್ಕುಗಳ ಸುರಕ್ಷಾ ಸಮಿತಿ ರಚಿಸಬೇಕು. ಕಡ್ಡಾಯವಾಗಿ ದೂರು ಪೆಟ್ಟಿಗೆಗಳನ್ನು ಅಳವಡಿಸಬೇಕು. ನಿಯಮಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಶಮ್ಲಾ ಇಕ್ಬಾಲ್, ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಸಿ.ವಿ.ಸ್ನೇಹಾ, ಯುನಿಸೆಫ್ನ ಸಂಯೋಜಕ ರಾಘವೇಂದ್ರ ಭಟ್, ನಿಮ್ಹಾನ್ಸ್ನ ವೈದ್ಯಾಧಿಕಾರಿ ಡಾ.ಜನಾರ್ಧನ್, ಶಾಲಾ ಸಮಗ್ರ ಶಿಕ್ಷಣ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹೇಶ್ ಬಾಬು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.