ಮಂಗಳವಾರ, ಆಗಸ್ಟ್ 3, 2021
26 °C

ಕೊರೊನಾ: ವೃದ್ಧ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರಘಟ್ಟ: ಚಿಕ್ಕಬಾಣಾವರ ಗ್ರಾಮದಲ್ಲಿ ವಾಸವಾಗಿದ್ದ ಉಡುಪಿ ಮೂಲದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

‘ತೀವ್ರ ಉಸಿರಾಟದ ತೊಂದರೆ ಎದುರಾಗಿದ್ದರಿಂದ ಬುಧವಾರ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಕ್ಕರೆ ಕಾಯಿಲೆಯಿಂದಲೂ ಅವರು ಬಳಲುತ್ತಿದ್ದರು’ ಎಂದು ಚಿಕ್ಕಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಜಯರಾಂ ತಿಳಿಸಿದ್ದಾರೆ.

ಗಣಪತಿ ನಗರ ಸೀಲ್‍ಡೌನ್

ಚಿಕ್ಕಬಾಣಾವರ ಗ್ರಾಮದ ಗಣಪತಿ ನಗರದಲ್ಲಿ ವೃದ್ಧೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಲಾಯಿತು.

ವೃದ್ಧೆಯು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ಪರೀಕ್ಷೆ ನಡೆಸಿದಾಗ ಅವರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಕೂಡಲೇ ನಗರವನ್ನು ಸೀಲ್‌ಡೌನ್ ಮಾಡಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು