ಮಂಗಳವಾರ, ಜೂಲೈ 7, 2020
28 °C

ಕೋವಿಡ್‌ನಿಂದ ವಿಧಾನಸೌಧದ ನೌಕರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್.ನಗರ (ಮೈಸೂರು): ವಿಧಾನಸೌಧದಲ್ಲಿ ‘ಡಿ’ ಗ್ರೂಪ್ ದರ್ಜೆಯ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ತಾಲ್ಲೂಕಿನ ಕಂಚಿನಕೆರೆ ಗ್ರಾಮದ 36 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ರಾತ್ರಿ ಮೃತಪಟ್ಟಿದ್ದು, ಕೊರೊನಾ ಸೋಂಕು ಇತ್ತೆಂಬುದು ಮಂಗಳವಾರ ದೃಢಪಟ್ಟಿದೆ.

‘ಇವರು ಕುಟುಂಬ ಸಮೇತ ಬೆಂಗಳೂರಿನಲ್ಲಿ ವಾಸವಾಗಿದ್ದರು. ಜ್ವರದಿಂದ ಬಳಲುತ್ತಿದ್ದು, ಜೂನ್ 27ರಂದು ಕಂಚಿನಕೆರೆ ಗ್ರಾಮಕ್ಕೆ ಬಂದಿದ್ದರು. 28ರಂದು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದರು’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಮಹೇಂದ್ರಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಎಚ್.ಕೆ.ಪಾಟೀಲ ಸಚಿವರಾಗಿದ್ದಾಗ ಅವರ ಕಚೇರಿಯಲ್ಲಿ ಈ ವ್ಯಕ್ತಿ ಕೆಲಸ ಮಾಡಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.