ಶನಿವಾರ, ಮೇ 30, 2020
27 °C

ಬೆಂಗಳೂರಿನ ಸಂಚಾರ ಕಾನ್‌ಸ್ಟೆಬಲ್‌ಗೂ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

coronavirus infection confirmed in police constable

ಬೆಂಗಳೂರು: ಬೆಂಗಳೂರಿನ ಸಂಚಾರ ಠಾಣೆಯೊಂದರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರಿಗೂ ಕೊರೊನಾ ಸೋಂಕು ತಗುಲಿದ್ದು, ಪೊಲೀಸ್ ಇಲಾಖೆಯಲ್ಲಿ ಆತಂಕ ಮೂಡಿಸಿದೆ.

ರಾಮಕೃಷ್ಣ ಹೆಗಡೆ ನಗರದ ನಿವಾಸಿಯಾಗಿರುವ ಕಾನ್‌ಸ್ಟೆಬಲ್, ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ಬಾರಿ ಫ್ರೇಜರ್ ಟೌನ್‌ ಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕೊರೊನಾ ಕರ್ತವ್ಯದಿಂದಾಗಿ ಕಳೆದ ತಿಂಗಳೇ ಕುಟುಂಬದವರನ್ನು ಊರಿಗೆ ಕಳುಹಿಸಿದ್ದ ಕಾನ್‌ಸ್ಟೆಬಲ್ ಮನೆಯಲ್ಲಿ ಒಬ್ಬರೇ ವಾಸವಿದ್ದರು.

ಇದೇ 20ರಂದು ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಅವರು ಒಳಪಟ್ಟಿದ್ದರು. ಗುರುವಾರ ರಾತ್ರಿ ವರದಿ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಜೊತೆ ಸಂಪರ್ಕದಲ್ಲಿದ್ದ ಕೆಲವರನ್ನು ಕ್ವಾರಂಟೈನ್ ಮಾಡಲಾಗಿದೆ. ಇನ್ನು ಹಲವರ ಪತ್ತೆಗೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಕ್ರಮ ಕೈಗೊಂಡಿದೆ.

'ಕಾನ್‌ಸ್ಟೆಬಲ್‌ಗೆ ಕೊರೊನಾ ಸೋಂಕು ತಗುಲಿದ್ದಕ್ಕಾಗಿ ಠಾಣೆಯನ್ನು ಸ್ಯಾನಿಟೈಸ್ ಮಾಡಲು ಹಾಗೂ ಅವರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದವರ ಮಾಹಿತಿ ನೀಡಲು ಹೇಳಲಾಗಿದೆ' ಎಂದು ಸಂಚಾರ ವಿಭಾಗದ (ಪೂರ್ವ) ಡಿಸಿಪಿ ನಾರಾಯಣ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು