ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಇದೇ 31 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಕಾರ್ಯಪಡೆಯ ಮುಖ್ಯಸ್ಥ ರಮೇಶ್ ಕುಮಾರ್ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಹಸನಬ್ಬ ಅವರು ಉಪಸ್ಥಿತರಿದ್ದರು.

ಕಾರ್ಯಪಡೆಯ ಮೊದಲ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಕಾರ್ಯಪಡೆಯ ಮುಖ್ಯಸ್ಥರು ಹಾಗೂ ಸದಸ್ಯರುಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಕಾರ್ಯಪಡೆಯ ಮುಂದಿನ ಕಾರ್ಯಕ್ರಮಗಳ ರೂಪುರೇಷೆ ಕುರಿತು ಚರ್ಚೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.