ಶನಿವಾರ, ಸೆಪ್ಟೆಂಬರ್ 19, 2020
23 °C

ಕೋವಿಡ್: ಪೌರಕಾರ್ಮಿಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆತ್ಮಹತ್ಯೆ–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಬಿಬಿಎಂಪಿಯ ಪೌರಕಾರ್ಮಿಕರೊಬ್ಬರು ಬುಧವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಕೊರೊನಾ ಸೋಂಕಿತರಾಗಿದ್ದ ರಂಗನಾಥ್‌ (44) ಬುಧವಾರ ಮಧ್ಯಾಹ್ನವಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿನ ಸ್ನೇಹಿತನ ಮನೆಯಲ್ಲಿ ಸಂಜೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

‘ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು, ಈ ವಿಷಯವನ್ನು ಕುಟುಂಬ ಸದಸ್ಯರಿಗೆ ತಿಳಿಸಿರಲಿಲ್ಲ. ಕೊರೊನಾ ಪಾಸಿಟಿವ್‌ ವರದಿ ಬಂದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು. ಸೋಂಕಿನ ಯಾವುದೇ ಲಕ್ಷಣವಿಲ್ಲ, ಗುಣಮುಖರಾಗಿದ್ದೀರಿ, ಮನೆಗೆ ಹೋಗಬಹುದು ಎಂದು ವೈದ್ಯರು ಹೇಳಿದ ನಂತರವೂ ಅವರು ಮನೆಗೆ ತೆರಳಲು ಒಪ್ಪಿರಲಿಲ್ಲ. ಕೆಲವು ದಿನ ಆಸ್ಪತ್ರೆಯಲ್ಲಿಯೇ ಇಟ್ಟುಕೊಳ್ಳುವಂತೆ ವೈದ್ಯರಲ್ಲಿ ಮನವಿ ಮಾಡಿದ್ದರು. ಆದರೆ, ಗುಣಮುಖರಾದ ನಂತರ, ಬುಧವಾರ ಆಸ್ಪತ್ರೆಯಿಂದ ಅವರನ್ನು ಕಳಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು