ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ (ಸೆ.6) ಕೊರೊನಾ ತಪಾಸಣೆ ಶಿಬಿರ

Last Updated 4 ಸೆಪ್ಟೆಂಬರ್ 2020, 19:54 IST
ಅಕ್ಷರ ಗಾತ್ರ

ಬೆಂಗಳೂರು: ಪಾಲಿಕೆ, ಕಿದ್ವಾಯಿ ಹಾಗೂ ಆನಂದ್ ಡಯಾಗ್ನೋಸ್ಟಿಕ್ಸ್ ಸಹಯೋಗದಲ್ಲಿ ಬೌರಿಂಗ್ ಇನ್‍ಸ್ಟಿಟ್ಯೂಟ್ ಸಂಸ್ಥೆಯು ತನ್ನ ಸಿಬ್ಬಂದಿ ಹಾಗೂ ಸದಸ್ಯರಿಗಾಗಿ ಕೊರೊನಾ ತಪಾಸಣೆ ಶಿಬಿರವನ್ನು ಸಂಸ್ಥೆಯ ಕ್ಲಬ್‍ನಲ್ಲಿ ಸೆ.6ರಂದು ಹಮ್ಮಿಕೊಂಡಿದೆ.

'ಸೆ.14ರಿಂದ ಬೌರಿಂಗ್ ಸಂಸ್ಥೆ ಕಾರ್ಯಾಚರಣೆ ಆರಂಭಿಸಲಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ಯಾವ ಸಿಬ್ಬಂದಿಯೂ ಕೊರೊನಾ ಸಂಪರ್ಕ ಹೊಂದಿರದಂತೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ಕೊರೊನಾಮುಕ್ತರೆಂದು ದೃಢಪಡಿಸಿಕೊಳ್ಳುವ ಸಲುವಾಗಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ 300ಕ್ಕೂ ಹೆಚ್ಚು ಸದಸ್ಯರು ತಪಾಸಣೆಗೆ ನೋಂದಣಿ ಮಾಡಿಕೊಂಡಿದ್ದಾರೆ' ಎಂದು ಬೌರಿಂಗ್ ಇನ್‍ಸ್ಟಿಟ್ಯೂಟ್‍ನ ಗೌರವ ಕಾರ್ಯದರ್ಶಿ ಎಚ್.ಎಸ್.ಶ್ರೀಕಾಂತ್ ತಿಳಿಸಿದರು.

'ಶಿಬಿರದಲ್ಲಿ ಯಾರಿಗಾದರೂ ಕೊರೊನಾ ಸೋಂಕು ಇರುವುದು ಪತ್ತೆಯಾದಲ್ಲಿ, ಅವರಿಗೆ ಸೂಕ್ತ ಚಿಕಿತ್ಸೆ ಹಾಗೂ ಹೋಂ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುವುದು. ಇದು ಸಾಧ್ಯವಾಗದಿದ್ದರೆ, ಅವರ ನಿವಾಸದ ಸಮೀಪದ ಹೋಟೆಲ್‍ನಲ್ಲಿ ಕ್ವಾರಂಟೈನ್ ವ್ಯವಸ್ಥೆ ಇರಲಿದೆ. ಅವರಿಗೆ ಉತ್ತಮ ಆಹಾರ ಹಾಗೂ ಆರೋಗ್ಯ ಸೇವೆ ಒದಗಿಸಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT