ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ನಾಲ್ವರು ಶಂಕಿತರ ಮೇಲೆ ಶನಿವಾರದಿಂದ ವಿಶೇಷ ನಿಗಾ ಇರಿಸಲಾಗಿದ್ದು, ಅವರು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುಣೆಯ ರಾಷ್ಟ್ರೀಯ ರೋಗಸೂಕ್ಷ್ಮಾಣು ಅಧ್ಯಯನ ಸಂಸ್ಥೆಯಿಂದ (ಎನ್ಐವಿ) 9 ಮಂದಿಯ ವರದಿ ಬಂದಿದ್ದು, ಯಾರಿಗೂ ಸೋಂಕು ತಟ್ಟಿಲ್ಲ ಎನ್ನುವುದು ದೃಢಪಟ್ಟಿದೆ. ಈವರೆಗೆ ಒಟ್ಟು 85 ಮಂದಿಯ ಪರೀಕ್ಷಾ ವರದಿ ಬಂದಿದ್ದು, ಎಲ್ಲರೂ ನಿರಾಳರಾಗಿದ್ದಾರೆ. ಅಧಿಕ ಸಂಖ್ಯೆಯಲ್ಲಿ ಸೋಂಕು ವರದಿಯಾದ ದೇಶಗಳಿಂದ ಬಂದಿರುವ 138 ಮಂದಿಯನ್ನು ಗುರುತಿಸಲಾಗಿದ್ದು, ಆರೋಗ್ಯ ಕಾರ್ಯಕರ್ತೆಯರು ಅವರ ಮಾಹಿತಿಯನ್ನು ನಿತ್ಯ ಕಲೆ ಹಾಕುತ್ತಿದ್ದಾರೆ. ಅವರಲ್ಲಿ 130 ಮಂದಿ ನಗರದ ವಿವಿಧೆಡೆ ಮನೆಗಳಲ್ಲಿ ನೆಲೆಸಿದ್ದು, ಉಳಿದವರು ಹೋಟೆಲ್ ಸೇರಿದಂತೆ ಬೇರೆ ಸ್ಥಳಗಳಲ್ಲಿ ವಾಸವಿದ್ದಾರೆ.

ಈ ಸೋಂಕಿನ ಬಗ್ಗೆ ಮೆಟ್ರೊ, ರೈಲು ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ವಿವರಕ್ಕೆ ಸಹಾಯವಾಣಿ 104ಕ್ಕೆ ಕರೆ ಮಾಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಈವರೆಗೆ 1,792 ಮಂದಿ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.

ನಿತ್ಯಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಈವರೆಗೆ 14,153 ಮಂದಿಯನ್ನು ತಪಾಸಣೆ ಮಾಡಲಾಗಿದ್ದು, ಯಾವುದೇ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.