ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ–ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ‘ಕರೋನರಿ ಆಂಜಿಯೋಗ್ರಾಮ್’ ಚಿಕಿತ್ಸಾ ವಿಧಾನವನ್ನು ಸೇರ್ಪಡೆ ಮಾಡಲಾಗಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕರೋನರಿ ಆಂಜಿಯೋಗ್ರಾಮ್ ಪರೀಕ್ಷೆಯು ಹೃದಯದ ರಕ್ತನಾಳಗಳಲ್ಲಿ ರಕ್ತದ ಹರಿವನ್ನು ಪರೀಕ್ಷಿಸಲು, ಅವುಗಳಲ್ಲಿರುವ ಅಡಚಣೆಗಳನ್ನು ಪತ್ತೆಹಚ್ಚಲು ಸಹಕಾರಿ. ಇದು ಒಂದು ವಿಶೇಷ ಎಕ್ಸ್-ರೇ ಪರೀಕ್ಷೆಯಾಗಿದೆ. 2025ರ ಅಕ್ಟೋಬರ್ನಲ್ಲಿ ನಡೆದ ತಾಂತ್ರಿಕ ಸಭೆಯಲ್ಲಿ ಹೃದ್ರೋಗ ತಜ್ಞರು ಈ ಚಿಕಿತ್ಸಾ ವಿಧಾನಕ್ಕೆ ಶಿಫಾರಸು ಮಾಡಿದ್ದರು.

ಈಗ ಯೋಜನೆಯಡಿ ಈ ಚಿಕಿತ್ಸಾ ವಿಧಾನವನ್ನು ಸೇರ್ಪಡೆ ಮಾಡಿ, ತಲಾ ₹6,500 ದರ ನಿಗದಿಪಡಿಸಲಾಗಿದೆ. ಯೋಜನೆಯಡಿ ಚಿಕಿತ್ಸಾ ವಿಧಾನವು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಾಗಲಿದ್ದು, ಬಿಪಿಎಲ್ ಕುಟುಂಬದ ಫಲಾನುಭವಿಗಳಿಗೆ ಸೀಮಿತಗೊಳಿಸಲಾಗಿದೆ. ಪರೀಕ್ಷೆಯ ನಿಗದಿತ ಮೊತ್ತವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆಸ್ಪತ್ರೆಗಳಿಗೆ ಪಾವತಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.