ಬೆಂಗಳೂರು: ಕಲಾಸಿಪಾಳ್ಯ ಠಾಣೆಯ ಮಹಿಳಾ ಕಾನ್ಸ್ಟೆಬಲ್ಗೂ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಅವರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಾಮರಾಜಪೇಟೆ ಬಳಿಯ ಪೇಯಿಂಗ್ ಗೆಸ್ಟ್ ಕಟ್ಟಡವೊಂದರಲ್ಲಿ ವಾಸವಿದ್ದ ಕಾನ್ಸ್ಟೆಬಲ್, ಠಾಣೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಇದುವರೆಗೂ ಗೊತ್ತಾಗಿಲ್ಲ.

ಇತ್ತೀಚೆಗೆ ಸಿಬ್ಬಂದಿಯನ್ನು ಸಾಮೂಹಿಕವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರ ವರದಿ ಸೋಮವಾರ ಬಂದಿದ್ದು, ಮಹಿಳಾ ಕಾನ್ಸ್ಟೆಬಲ್ ವರದಿ ಪಾಸಿಟಿವ್ ಇದೆ. ಉಳಿದವರದ್ದು ನೆಗೆಟಿವ್ ಬಂದಿದೆ. ಸೋಂಕಿತೆ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಒಡನಾಟವಿಟ್ಟುಕೊಂಡಿದ್ದವರ ಪಟ್ಟಿಯನ್ನು ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸಿದ್ಧಪಡಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.