ಬೆಂಗಳೂರು:ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್ಐ) ಹಾಗೂ ನಿಮ್ಹಾನ್ಸ್ ಬಳಿಯಿರುವ ಎನ್ಐವಿ ವೈದ್ಯಕೀಯ ಪ್ರಯೋಗಾಲಯದಲ್ಲಿ ಕೊರೊನಾ ವೈರಸ್ ಶಂಕಿತ ವ್ಯಕ್ತಿಗಳ ರಕ್ತ ಪರೀಕ್ಷೆ ಸೋಮವಾರದಿಂದ ಪ್ರಾರಂಭವಾಗಲಿದೆ.

ಪುಣೆಯ ರಾಷ್ಟ್ರೀಯ ರೋಗಸೂಕ್ಷ್ಮಾಣು ಅಧ್ಯಯನ ಸಂಸ್ಥೆಯಿಂದ(ಎನ್ಐವಿ) ಪರೀಕ್ಷಾ ವರದಿ ಬರುವುದು ವಿಳಂಬವಾಗುತ್ತಿರುವುದರಿಂದ ನಗರದಲ್ಲಿಯೇ ಪ್ರಯೋಗಾಲಯ ಪ್ರಾರಂಭಿಸಲಾಗಿದೆ. ಇದರಿಂದಾಗಿ ವರದಿಗಳು ಬೇಗ ಶಂಕಿತರ ಕೈ ಸೇರಲಿವೆ.ಜ.21 ರಿಂದ ಈವರೆಗೆ 84 ಶಂಕಿತರ ರಕ್ತದ ಮಾದರಿಯನ್ನುಎನ್ಐವಿಗೆ ಕಳುಹಿಸಲಾಗಿತ್ತು. ಅದರಲ್ಲಿ 28 ಮಂದಿಗೆ ಸೋಂಕು ತಗುಲಿಲ್ಲ ಎನ್ನುವುದು ದೃಢಪಟ್ಟಿದೆ. ಶನಿವಾರ ಮತ್ತು ಭಾನುವಾರ 43 ಶಂಕಿತರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಚೀನಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಲ್ಲಿಂದ ಬಂದವರು ಕೆಲವೊಂದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ‘ಮನೆಯಲ್ಲಿ 14 ದಿನಗಳು ಪ್ರತ್ಯೇಕವಾಗಿ ಮಲಗಬೇಕು. ಸೀನುವಾಗ ಮತ್ತು ಕೆಮ್ಮುವಾಗ ಮೂಗು ಹಾಗೂ ಬಾಯಿಯನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಕುಟುಂಬದ ಸದಸ್ಯರು ಹಾಗೂ ಹೊರಗಿನವರೊಂದಿಗೆಸಾಧ್ಯವಾದಷ್ಟು ಅಂತರ ಕಾಯ್ದುಕೊಳ್ಳಬೇಕು’ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.