ಸೋಮವಾರ, ಮೇ 25, 2020
27 °C

ಬೆಂಗಳೂರಿನಲ್ಲಿ 274 ಮಂದಿಗೆ ಆರೋಗ್ಯ ತಪಾಸಣೆ: ಒಬ್ಬರಿಗೆ ಸೋಂಕು ಲಕ್ಷಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಬಿಬಿಎಂಪಿ ವತಿಯಿಂದ ಆರಂಭಿಸಲಾಗಿರುವ 31 ಜ್ವರ ತಪಾಸಣಾ ಕೇಂದ್ರಗಳಲ್ಲಿ (ಫಿವರ್‌ ಕ್ಲಿನಿಕ್‌) ಸೋಮವಾರ ಒಟ್ಟು 274 ಮಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ.

ಈ ಪೈಕಿ ಸಿದ್ದಯ್ಯ ರಸ್ತೆಯ ಕ್ಲಿನಿಕ್‌ನಲ್ಲಿ ತಪಾಸಣೆಗೆ ಒಳಪಟ್ಟ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದೆ. ಅವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಅವರನ್ನು ಪೀಣ್ಯ ಇಎಸ್‌ಐ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ತಪಾಸಣೆಯ ವರದಿ ಇನ್ನಷ್ಟೇ ಬರಬೇಕಿದೆ.

ಜ್ವರ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆಗೆ ಒಳಪಟ್ಟವರಲ್ಲಿ ಇಬ್ಬರಿಗೆ ಅಲ್ಪ ಪ್ರಮಾಣದ ಜ್ವರ, ಇಬ್ಬರಿಗೆ ಸಾಧಾರಣ ಜ್ವರ ಹಾಗೂ ಇನ್ನಿಬ್ಬರಿಗೆ ತೀವ್ರ ಜ್ವರ ಇತ್ತು. ಅವರ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು