ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಒಂದೇ ದಿನ 735 ಮಂದಿಗೆ ಕೊರೊನಾ ಸೋಂಕು

ನಗರದಲ್ಲಿ ಮೃತರ ಸಂಖ್ಯೆ 97ಕ್ಕೆ ಏರಿಕೆ
Last Updated 1 ಜುಲೈ 2020, 22:06 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಬುಧವಾರ ಒಂದೇ ದಿನ 735 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಕೋವಿಡ್ ಪೀಡಿತರ ಸಂಖ್ಯೆ 5 ಸಾವಿರದ ಗಡಿ (5,290) ದಾಟಿದೆ.

ಮತ್ತೆ ಇಬ್ಬರು ರೋಗಿಗಳು ಮೃತಪಟ್ಟಿದ್ದು, ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಒಂದು ವಾರದಿಂದ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 4,649ಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಅಸ್ವಸ್ಥಗೊಂಡವರು ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತೀವ್ರ ನಿಗಾ ಘಟಕದ (ಐಸಿಯು) ಹಾಸಿಗೆಗಳು ಕೂಡ ಭರ್ತಿಯಾಗುತ್ತಿವೆ. ಸದ್ಯ 191 ರೋಗಿಗಳು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಅಡುಗೆ ಸಿಬ್ಬಂದಿಯೊಬ್ಬರು ಕೋವಿಡ್ ಪೀಡಿತರಾಗಿದ್ದಾರೆ. 35 ವರ್ಷದ ವ್ಯಕ್ತಿಗೆ ರೋಗಿಗಳ ಸಂಪರ್ಕದಿಂದಲೇ ಸೋಂಕು ತಗುಲಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ 30 ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲಿ ಅಡುಗೆ ಮಾಡುವುದನ್ನು ಸ್ಥಗಿತ ಮಾಡಲಾಗಿದ್ದು, ಹೊರಗಿನಿಂದ ಆಹಾರ ತರಿಸಲಾಗುತ್ತಿದೆ.

ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರು, ಶುಶ್ರೂಷಕರು ಸೇರಿದಂತೆ ಈವರೆಗೆ ಒಟ್ಟು 11 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT