ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಅಟ್ಟಹಾಸ: ಬೆಂಗಳೂರಿನಲ್ಲಿ ಮೂರನೇ ಬಲಿ, ರಾಜ್ಯದಲ್ಲಿ 13 ಸಾವು

Last Updated 16 ಏಪ್ರಿಲ್ 2020, 5:14 IST
ಅಕ್ಷರ ಗಾತ್ರ

ಬೆಂಗಳೂರು: ನಗರದ 66 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ವೈರಸ್‌ (ಕೋವಿಡ್‌–19)ಕ್ಕೆಗುರುವಾರ ಬಲಿಯಾಗಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 13 ಮಂದಿ ಸಾವಿಗೀಡಾಗಿದ್ದಾರೆ.

ಮೃತರಾದ ಬೆಂಗಳೂರಿನ ವ್ಯಕ್ತಿ (195 ನೇ ರೋಗಿ) ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರನ್ನು ಏ.10ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಮನಾರ್ಹವಾಗಿ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇತ್ತ ಮೈಸೂರಿನಲ್ಲಿ ಬುಧವಾರ ಒಂದೇ ದಿನ 10 ಪ್ರಕರಣಗಳು ವರದಿಯಾಗಿದ್ದು,ಚಿಕ್ಕಬಳ್ಳಾಪುರದ 65 ವರ್ಷದ ವ್ಯಕ್ತಿ ಹಾಗೂ ಬೆಳಗಾವಿಯ 80 ವರ್ಷದ ವೃದ್ಧೆ ಕೋವಿಡ್‌–19ಕ್ಕೆ ಸಾವಿಗೀಡಾಗಿದ್ದರು.

ಈವರೆಗೆ ರಾಜ್ಯದಲ್ಲಿ ಒಂದು ದಿನ ವರದಿಯಾದ ಗರಿಷ್ಠ ಪ್ರಕರಣಗಳ ಸಂಖ್ಯೆ 17. ಆದರೆ, ರಾಜ್ಯದಲ್ಲಿ ಬುಧವಾರ ಒಂದೇ ದಿನ 19 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಂದೇ ದಿನ ಅತ್ಯಧಿಕ ಪ್ರಕರಣ ವರದಿಯಾದಂತಾಗಿದೆ.

ಬೆಂಗಳೂರು ವಲಯದಲ್ಲಿ ಈವರೆಗೆ ಒಟ್ಟು 71ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 31 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್‌ಚಾರ್ಜ್ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT