ಶನಿವಾರ, ಜುಲೈ 31, 2021
25 °C
ಪರೀಕ್ಷೆ ನಡೆದಲ್ಲಿ ಅಧಿಕ ಪ‍್ರಕರಣ ವರದಿಯಾಗುವ ಭೀತಿ

ಕೋವಿಡ್‌ ವಾರ್‌ ರೂಮ್ ವಿಶ್ಲೇಷಣೆ: ರ್‍ಯಾಂಡಮ್ ಪರೀಕ್ಷೆಗೆ ನಿರಾಸಕ್ತಿ

ವರುಣ ಹೆಗಡೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರನ್ನು ಪತ್ತೆ ಮಾಡಲು ರ್‍ಯಾಂಡಮ್ ಕೋವಿಡ್‌ ಪರೀಕ್ಷೆ ನಡೆಸಬೇಕೆಂಬ ತಜ್ಞರ ಸಲಹೆಗೆ ನಿರಾಸಕ್ತಿ ತೋರಿರುವ ಸರ್ಕಾರ, ಈ ಮಾದರಿಯ ಪರೀಕ್ಷೆ  ನಡೆಸಲು ಹಿಂದೇಟು ಹಾಕುತ್ತಿದೆ.

ಕೋವಿಡ್‌ ವಾರ್‌ ರೂಮ್ ವಿಶ್ಲೇಷಣೆಯ ಪ್ರಕಾರ ರಾಜ್ಯದಲ್ಲಿ ವರದಿಯಾಗುತ್ತಿರುವ ಶೇ 97 ರಷ್ಟು ಪ್ರಕರಣಗಳಲ್ಲಿ ಸೋಂಕಿನ ಲಕ್ಷಣಗಳೇ ಗೋಚರಿಸುತ್ತಿಲ್ಲ. ಇದರಿಂದಾಗಿಯೇ ಯಾರಿಗೆ ಸೋಂಕು ತಗುಲಿದೆ ಎನ್ನುವುದನ್ನು ಪತ್ತೆ ಹಚ್ಚುವುದು ಆರೋಗ್ಯ ಸಿಬ್ಬಂದಿಗೆ ಸವಾಲಾಗಿದೆ. ಇನ್ನೊಂದೆಡೆ ಕೋವಿಡ್ ಪೀಡಿತರಾದವರಲ್ಲಿ ಬಹುತೇಕರಿಗೆ ಹೇಗೆ ಸೋಂಕು ತಗುಲಿತು ಎನ್ನುವುದೇ ತಿಳಿದಿಲ್ಲ. ಹಾಗಾಗಿಯೇ ರಾಜ್ಯದಲ್ಲಿ ಆರ್‌ಟಿ–ಪಿಸಿಆರ್ ಪೂಲ್ ಮಾದರಿಯ ತಂತ್ರಜ್ಞಾನವನ್ನು ಬಳಸಿಕೊಂಡು ರ್‍ಯಾಂಡಮ್ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಕ್ಷೇತ್ರದ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಆರೋಗ್ಯ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿತ್ತಾ
ದರೂ ಪರೀಕ್ಷೆ ಮಾತ್ರ ಪ್ರಾರಂಭಿಸಿಲ್ಲ. 

ರಾಜ್ಯದಲ್ಲಿ ಕೋವಿಡ್ ಪ‍ರೀಕ್ಷೆಯನ್ನು ಹೆಚ್ಚಿಸಿದ ಪರಿಣಾಮ ಕೆಲ ದಿನಗಳಿಂದ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟುತ್ತಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿದೆಯೋ ಇಲ್ಲವೋ ಎಂಬ ಚರ್ಚೆ ಕೂಡ ಮುನ್ನೆಲೆಗೆ ಬಂದಿದೆ. ಪೊಲೀಸ್ ಸಿಬ್ಬಂದಿ, ಚಾಲಕರು, ಆರೋಗ್ಯ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರೊಂದಿಗೆ ಸಂಪರ್ಕ ಹೊಂದಿರುವವರು ಹೆಚ್ಚಾಗಿ ಸೋಂಕಿತರಾಗುತ್ತಿದ್ದಾರೆ. ಈ ಹಿಂದೆ ಬೆಂಗಳೂರು ಸೇರಿದಂತೆ ಕೆಲವೆಡೆ ಪ್ರಾಯೋಗಿಕವಾಗಿ ನಡೆಸಿದ್ದ ರ್‍ಯಾಂಡಮ್ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ವರದಿಯಾಗಿದ್ದವು. 

*
ಕೊರೊನಾ ಸೋಂಕಿತರನ್ನು ಪತ್ತೆ ಮಾಡಲು ರ್‍ಯಾಂಡಮ್ ಮತ್ತುಆ್ಯಂಟಿಜನ್ ಪರೀಕ್ಷೆ ಮಾಡಲಾಗುತ್ತದೆ. ಮೂರರಿಂದ ನಾಲ್ಕು ದಿನಗಳಲ್ಲಿ ಕಿಟ್‌ಗಳು ಬರಲಿವೆ.
-ಡಾ. ಓಂ ಪ್ರಕಾಶ್ ‍ಪಾಟೀಲ್, ಆರೋಗ್ಯ ಇಲಾಖೆ ನಿರ್ದೇಶಕ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು