ಶನಿವಾರ, ಜೂನ್ 25, 2022
24 °C

ಸ್ಮಶಾನದಲ್ಲೇ ಉಪಹಾರ ಸೇವಿಸಿದ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಶವಗಳ ಅಂತ್ಯಸಂಸ್ಕಾರ ಮಾಡುವ ಸಿಬ್ಬಂದಿ ಜೊತೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಶನಿವಾರ ಸ್ಮಶಾನದಲ್ಲೇ ಉಪಹಾರ ಸೇವಿಸಿದರು.

ತಾವರೆಕೆರೆಯ ಸ್ಮಶಾನಕ್ಕೆ ಶನಿವಾರ ಭೇಟಿ ನೀಡಿದ ಅವರು ಶವ ಸುಡುವ ಸಿಬ್ಬಂದಿಗೆ ಖುದ್ದು ಉಪಹಾರ ಬಡಿಸಿ, ಅವರ ಸಮಸ್ಯೆಗಳನ್ನು ಆಲಿಸಿದರು. ಪರಿಸರ ದಿನದ ಅಂಗವಾಗಿ ಸ್ಮಶಾನದ ಖಾಲಿ ಜಾಗದಲ್ಲಿ ಸಸಿ ನೆಟ್ಟು ವನಮಹೋತ್ಸವಕ್ಕೂ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು,‘ನಗರೀಕರಣದ ಭರದಲ್ಲಿ ಮರಗಳನ್ನು ಕಳೆದುಕೊಳ್ಳುತ್ತಿದ್ದೇವೆ.‌ ಒಬ್ಬ ವ್ಯಕ್ತಿಗೆ ಎಂಟು ಮರ ಇರಬೇಕು. ನಗರದ ಖಾಲಿ ಸ್ಥಳಗಳಲ್ಲಿ ಹೆಚ್ಚು ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು’ ಎಂದು ಹೇಳಿದರು.

ಸ್ಮಶಾನಗಳ ನೌಕರರ ಒಕ್ಕೂಟದ ಸುರೇಶ್, ‘ಜಿಲ್ಲಾಧಿಕಾರಿಗಳು ನಮ್ಮೊಂದಿಗೆ ಕುಳಿತು ಊಟ ಮಾಡಿದ್ದಲ್ಲದೆ, ಸ್ವತಃ ತಿಂಡಿ ಬಡಿಸಿದ್ದಾರೆ. ನಮ್ಮ ಕಷ್ಟ-ಸುಖ ವಿಚಾರಿಸಿದ್ದಾರೆ. ನಮಗೆ ಬಹಳ ಸಂತೋಷವಾಗಿದೆ’ ಎಂದರು.

ಸ್ಮಶಾನ ಸಿಬ್ಬಂದಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು