ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲದೇವನಹಳ್ಳಿ: ಹೊಯ್ಸಳ ಚಾಲಕನಿಗೆ ಸೋಂಕು

Last Updated 7 ಜೂನ್ 2020, 17:31 IST
ಅಕ್ಷರ ಗಾತ್ರ

ಹೆಸರಘಟ್ಟ: ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಹೊಯ್ಸಳ ಜೀಪ್‌ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

‘ಸೋಂಕಿತ ವ್ಯಕ್ತಿಯು ಅಬ್ಬಿಗೆರೆ ನಿವಾಸಿಯಾಗಿದ್ದು,ಇಲಾಖೆಯ ಪರೀಕ್ಷೆಗೆ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸಲು ತಪಾಸಣೆಗೆ ಒಳಗಾದಾಗ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕಿತ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪಪತ್ರೆಗೆ ದಾಖಲಿಸಲಾಗಿದೆ. ಈ ವ್ಯಕ್ತಿಯ ಜೊತೆ 15 ಸಿಬ್ಬಂದಿ ಕೆಲಸ ಮಾಡಿದ್ದಾರೆ. ಅವರೆಲ್ಲರನ್ನೂ ಗುರುತಿಸಿ, ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುವುದು’ ಎಂದು ಚಿಕ್ಕಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಜಯರಾಂ ತಿಳಿಸಿದರು.

‘ಸೋಂಕಿತ ವ್ಯಕ್ತಿಯು ಮೇ 23ರಿಂದ 28ರವರೆಗೆ ರಜೆಯಲ್ಲಿದ್ದರು. ಈ ವೇಳೆ ಗ್ರಾಮದಿಂದ ಹೊರಗೆ ಹೋದಾಗ ಸೋಂಕು ತಗುಲಿರುವ ಸಾಧ್ಯತೆ ಇದೆ. ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ’ ಎಂದರು.

ಸೋಲದೇವನಹಳ್ಳಿ ಪೊಲೀಸ್‌ ಠಾಣೆ ಮತ್ತು ವಾಹನಗಳಿಗೆ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಲಾಯಿತು.ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿ ರಮೇಶ್‌ ಮತ್ತು ತಹಶೀಲ್ದಾರ್‌ ರಘುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT