ಶನಿವಾರ, ಮಾರ್ಚ್ 28, 2020
19 °C

ಕೆಐಎ: ಪ್ರಯಾಣಿಕರ ಸಂಖ್ಯೆ ಶೇ 50ರಷ್ಟು ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ (ಕೆಐಎ) ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಕೊರೊನಾ ವೈರಸ್‌ ಸೋಂಕು ಹರಡುವ ಭೀತಿಯಿಂದಾಗಿ ಶೇ 50ರಷ್ಟು ಕುಸಿದಿದೆ.

ಪ್ರಯಾಣಿಕರ ಸಂಖ್ಯೆ ಫೆಬ್ರುವರಿಯಲ್ಲಿ ಶೇ 20ರಷ್ಟು ಕುಸಿತ ಕಂಡಿತ್ತು. ಮಾರ್ಚ್‌ನಲ್ಲಿ ಮತ್ತಷ್ಟು ಕುಸಿದಿದೆ. ‘ವಿಮಾನ ನಿಲ್ದಾಣಕ್ಕೆ ನಿತ್ಯ ಅಂದಾಜು 15 ಸಾವಿರ ಪ್ರಯಾಣಿಕರು ಬರುತ್ತಿದ್ದರು. ಆದರೆ, ಈ ಸಂಖ್ಯೆ ಈಗ 6 ಸಾವಿರದಿಂದ 7 ಸಾವಿರಕ್ಕೆ ಕುಸಿದಿದೆ. ದೇಶದೊಳಗಿನ ಪ್ರಯಾಣಿಕರ ಸಂಖ್ಯೆಯಲ್ಲೂ ಶೇ 2ರಿಂದ ಶೇ 4ರಷ್ಟು ಇಳಿಕೆ ಕಂಡುಬಂದಿದೆ. ಭಾರತದಲ್ಲಿ ಕೋವಿಡ್‌ 19 ಸೋಂಕು ತಗುಲಿದ ಪ್ರಕರಣಗಳು ಹೆಚ್ಚಾದರೆ ದೇಶದೊಳಗಿನ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ’ ಎಂದು ಬಿಐಎಎಲ್‌ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

‘ವಾಣಿಜ್ಯ ಮತ್ತು ವ್ಯವಹಾರದ ಉದ್ದೇಶಗಳಿಗಾಗಿ ವಿದೇಶಗಳಿಂದ ಬರುವ ಪ್ರಯಾಣಿಕರನ್ನು ಕರೆತರಲು ಕಾರ್ಪೊರೇಟ್‌ ಸಂಸ್ಥೆಗಳು ಐಷಾರಾಮಿ ಕಾರುಗಳ ಸೇವೆಯನ್ನು ಬಳಸುತ್ತವೆ. ಅವರನ್ನೇ ಅವಲಂಬಿಸಿದ್ದ ವಾಹನಗಳು ಈಗ ನಷ್ಟಕ್ಕೆ ಸಿಲುಕಿವೆ’ ಎಂದು ರಾಜ್ಯ ಟ್ರಾವೆಲ್ ಆಪರೇಟರ್‌ಗಳ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಬೇಸರ ವ್ಯಕ್ತಪಡಿಸಿದರು.‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು