ಮಂಗಳವಾರ, ಆಗಸ್ಟ್ 3, 2021
23 °C

ಮಾಸ್ಕ್‌ ಧರಿಸದೆ, ಅಂತರ ಕಾಪಾಡದೆ ನಿಯಮ ಉಲ್ಲಂಘನೆ: ₹ 5.80 ಲಕ್ಷ ದಂಡ ವಸೂಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಪೂರ್ವ ವಿಭಾಗದ 13 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಜೂನ್‌ 24ರಿಂದ ಜುಲೈ 1ರವರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಾಮಾಜಿಕ ಸ್ಥಳಗಳಲ್ಲಿ  ಮಾಸ್ಕ್‌ ಧರಿಸದೆ ಮತ್ತು ಅಂತರ ಕಾಪಾಡದೆ ನಿಯಮ ಉಲ್ಲಂಘಿಸಿದ 2,900 ಪ್ರಕರಣಗಳನ್ನು ದಾಖಲಿಸಿ ₹ 5.80 ಲಕ್ಷ ದಂಡ ವಸೂಲಿ ಮಾಡಿದ್ದಾರೆ.

ಬಾಣಸವಾಡಿ, ರಾಮಮೂರ್ತಿ ನಗರ, ಹೆಣ್ಣೂರು, ಕೆ.ಜಿ. ಹಳ್ಳಿ, ಡಿ.ಜಿ.ಹಳ್ಳಿ, ಹಲಸೂರು, ಇಂದಿರಾನಗರ, ಬೈಯಪ್ಪನಹಳ್ಳಿ, ಜೆ.ಬಿ. ನಗರ, ಪುಲಿಕೇಶಿನಗರ, ಭಾರತೀನಗರ, ಶಿವಾಜಿನಗರ, ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬಿಬಿಎಂಪಿಯ ಆರೋಗ್ಯ ಅಧಿಕಾರಿಗಳು, ಮಾರ್ಷಲ್‌ಗಳು ಮತ್ತು ‍ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ನಿಯಮ ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಿದ್ದಾರೆ.

ಬಾಣವಾಡಿ ಠಾಣಾ ವ್ಯಾಪ್ತಿಯಲ್ಲಿ ಅತೀ ಹೆಚ್ಚು 630 ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ₹ 1.26 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಉಳಿದಂತೆ, ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ 358 ಪ್ರಕರಣ ದಾಖಲಿಸಿಕೊಂಡು ₹ 71,600, ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ 337 ಪ್ರಕರಣ ದಾಖಲಿಸಿಕೊಂಡು ₹ 67,400 ವಸೂಲಿ ಮಾಡಲಾಗಿದೆ.

ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಮತ್ತು ಅಂತರ ಕಾಪಾಡುವುದು ಕಡ್ಡಾಯಗೊಳಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು