ಮಂಗಳವಾರ, ಮಾರ್ಚ್ 31, 2020
19 °C
ಈವರೆಗೆ ₹ 36 ಕೋಟಿ ವೆಚ್ಚ– ಆರೋಗ್ಯ ಸಚಿವ ಬಿ. ಶ್ರೀರಾಮುಲು

ಸೋಂಕು ತಡೆಗೆ ಸನ್ನದ್ಧ: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೋವಿಡ್‌– 19 ಹರಡದಂತೆ ರಾಜ್ಯ ಸರ್ಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಹಣಕಾಸಿನ ಕೊರತೆ ಇಲ್ಲ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದರು.

ಕೋವಿಡ್‌– 19 ಕುರಿತು ವಿಧಾನಪರಿಷತ್‌ನಲ್ಲಿ‌ ಸೋಮವಾರ ನಡೆದ ಚರ್ಚೆಗೆ ಉತ್ತರಿಸಿದ ಅವರು, ‘ಮುನ್ನೆಚ್ಚರಿಕೆ ಕ್ರಮ ವಹಿಸಲು ₹36 ಕೋಟಿ ವೆಚ್ಚ ಮಾಡಿದ್ದೇವೆ. ಕೇಂದ್ರದ ನೆರವೂ ಪಡೆಯುತ್ತೇವೆ’ ಎಂದು ಅವರು ಹೇಳಿದರು.

‘ಕನಿಷ್ಠ ಮೂರು ತಿಂಗಳಿಗೆ ಸಾಕಾಗುವಷ್ಟು ಮಾಸ್ಕ್‌ಗಳು ಲಭ್ಯವಿದ್ದು, ಜೆನರಿಕ್ ಔಷಧಾಲಯಗಳಲ್ಲಿ ಸಿಗುತ್ತಿದೆ. ಕಾಳಸಂತೆಯಲ್ಲಿ ಮಾಸ್ಕ್
ಮಾರಾಟ ಮಾಡುವವರ ಮತ್ತು ಬಳಸಿದ ಮಾಸ್ಕ್ ಸ್ವಚ್ಛಗೊಳಿಸಿ‌ ಮಾರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಶ್ರೀರಾಮುಲು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು