ಸೋಮವಾರ, ಫೆಬ್ರವರಿ 17, 2020
16 °C
ಹೆಚ್ಚುತ್ತಿದೆ ಕೊರೊನಾ ಭೀತಿ: 797 ಮಂದಿಯಿಂದ ಕರೆ

ಕೊರೊನಾ: ಸಂದೇಹ ನಿವಾರಣೆಗೆ ಸಹಾಯವಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Coronavirus

ಬೆಂಗಳೂರು: ಕೊರೊನಾ ವೈರಸ್ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಿ ವಿಚಾರಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಈವರೆಗೆ 797 ಮಂದಿ ಕರೆ ಮಾಡಿ ತಮ್ಮ ಸಂದೇಹಗಳನ್ನು ದೂರ ಮಾಡಿಕೊಂಡಿದ್ದಾರೆ. 

ರೋಗ ಲಕ್ಷಣಗಳ ಬಗ್ಗೆ,  ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ, ರೋಗ ತಪಾಸಣೆಯ ಬಗ್ಗೆ,  ಈ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ನೆರೆರಾಜ್ಯ ಕೇರಳದಲ್ಲೂ ಮೂವರ ದೇಹದಲ್ಲಿ ಕೊರೊನಾ ವೈರಸ್‌ ಇರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಈ ಸೋಂಕಿನ ಬಗ್ಗೆ ಆತಂಕ ಇನ್ನಷ್ಟು ಹೆಚ್ಚಿದ್ದು, ನಮ್ಮ ರಾಜ್ಯದ ಗಡಿ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳವಾರ 5 ಮಂದಿಯ ವೈದ್ಯಕೀಯ ಪರೀಕ್ಷಾ ವರದಿ ಪುಣೆಯ ರಾಷ್ಟ್ರೀಯ ರೋಗಸೂಕ್ಷ್ಮಾಣು ಅಧ್ಯಯನ ಸಂಸ್ಥೆಯಿಂದ(ಎನ್‌ಐವಿ) ಬಂದಿದ್ದು, ಶಂಕಿತರಿಗೆ ಸೋಂಕು ತಗುಲಿಲ್ಲ ಎನ್ನುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿರುವವರ ರಕ್ತದ ಮಾದರಿಯನ್ನು ಪುಣೆಯ ಎನ್ಐವಿಗೆ ಕಳುಹಿಸಲಾಗುತ್ತಿದೆ. ಇದುವರೆಗೆ 44 ಮಂದಿಯ ರಕ್ತದ ಮಾದರಿಗಳಲ್ಲಿ ಯಾವುದೇ ಕೊರೊನಾ ವೈರಸ್‌ ಪತ್ತೆಯಾಗಿಲ್ಲ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ಹಾಗೂ ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಯ ಪ್ರಾಂಗಣದಲ್ಲಿರುವ ಎನ್‌ಐವಿ ವೈದ್ಯಕೀಯ ಪ್ರಯೋಗಾಲಯದಲ್ಲಿ ಮೊದಲ ಬ್ಯಾಚ್‌ನಲ್ಲಿ ಪರೀಕ್ಷೆಗೆ ಒಳಪಡಿಸಲಾದ 11 ಮಂದಿಯ ವರದಿ ಬಂದಿದ್ದು, ಯಾರಿಗೂ ಸೋಂಕು ತಗುಲಿಲ್ಲ ಎಂಬುದು ದೃಢಪಟ್ಟಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು