ಸೋಮವಾರ, ಜೂನ್ 1, 2020
27 °C

ಲಾಕ್‌ಡೌನ್‌: ವಾಹನಗಳ ಜಪ್ತಿಗೆ ಪೊಲೀಸರ ಜೊತೆ ರಸ್ತೆಗಿಳಿದ ಗೃಹ ಸಚಿವ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ ಉಲ್ಲಂಘಿಸಿ ಅನಗತ್ಯವಾಗಿ ನಗರದಲ್ಲಿ ಓಡಾಡುವ ವಾಹನಗಳನ್ನು ಜಪ್ತಿ ಮಾಡಲು ಪೊಲೀಸ್‌ ಅಧಿಕಾರಿಗಳ ಜೊತೆ ಖುದ್ದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬುಧವಾರ ರಸ್ತೆಗಿಳಿದರು.

ಪೊಲೀಸ್‌ ಕಮಿಷನ್‌ ಭಾಸ್ಕರ್ ರಾವ್ ಮತ್ತು ಕೇಂದ್ರ ಅಪರಾಧ ದಳ ಜಂಟಿ ಪೊಲೀಸ್‌ ಕಮಿಷನರ್‌ ಸಂದೀಪ್ ಪಾಟೀಲ ಜೊತೆ ಖಾಸಗಿ ವಾಹನದಲ್ಲಿ ನಗರದ ವಿವಿಧಡೆ ತೆರಳಿದ ಗೃಹ ಸಚಿವರು, ಜನರು ಲಾಕ್‌ಡೌನ್‌ ಪಾಲಿಸುತ್ತಿದ್ದಾರೆಯೇ ಎಂದು ಪರಿಶೀಲನೆ ನಡೆಸಿದರು.

ಈ ವೇಳೆ ರಸ್ತೆಗಳಲ್ಲಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ಪರಿಶೀಲನೆ ನಡೆಸಿದ ಸಚಿವರು ಮತ್ತು ಪೊಲೀಸ್ ಅಧಿಕಾರಿಗಳು, ಸಂಚಾರ ಪಾಸ್‌ ಪಡೆಯದ ವಾಹನಗಳನ್ನು ಜಪ್ತಿ ಮಾಡಿದರು.

ಪೂರ್ವ, ಉತ್ತರ ಮತ್ತು ಪಶ್ಚಿಮ ವಿಭಾಗದಲ್ಲಿ ಶಿವಾಜಿನಗರ, ಹೆಬ್ಬಾಳ, ಪೀಣ್ಯ, ಮೆಜೆಸ್ಟಿಕ್ ಮುಂತಾದ ಕಡೆ ಪೊಲೀಸ್‌ ಅಧಿಕಾರಿಗಳ ಜೊತೆ ಗೃಹ ಸಚಿವರು ತೆರಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು