ಮಂಗಳವಾರ, ಜೂನ್ 2, 2020
27 °C

ಹೊರಗೆ ಹೋಗಿ ಬಾಯಿ ತೆರೆದು ಸೀನಿ, ಎಲ್ಲರಿಗೂ ವೈರಸ್ ಹರಡಿ ಎಂದ ಟೆಕಿ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಜನರೆಲ್ಲರೂ ಹೊರಗೆ ಹೋಗಿ ಸೀನಿ. ಎಲ್ಲರಿಗೂ ವೈರಸ್ ಹರಡಿ’ ಎಂದು ಹೇಳಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಪ್ರಕಟಿಸಿರುವ ಮುಜೀಬ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

‘ನಗರದ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಮುಜೀಬ್, 25 ವರ್ಷದಿಂದ ಬೆಂಗಳೂರಿನಲ್ಲಿ ಇದ್ದಾನೆ. ಎಲ್ಲರಿಗೂ ವೈರಸ್ ಹರಡಿ ಎಂದು ಹೇಳಿ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಆರೋಪಿ ತನ್ನ ಫೇಸ್‌ಬುಕ್‌ ಖಾತೆಯಲ್ಲಿ, ‘ಈ ಮಾತನ್ನು ಹರಡಿ ಮಾತು ಮುಗಿಸಿ’ ಎಂದು ತನ್ನ ಫೋಟೊ ಸಮೇತ ಬರೆದುಕೊಂಡಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು