ಗುರುವಾರ , ಫೆಬ್ರವರಿ 27, 2020
19 °C

ಕೊರೊನಾ: ತಪಾಸಣಾ ಮಾರ್ಗಸೂಚಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲೂ ಕೊರೊನಾ ವೈರಸ್‌ ಹಬ್ಬುವ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತ ವೈದ್ಯಕೀಯ ಪರೀಕ್ಷೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 

ರೋಗಿಗಳು ಹಾಗೂ ಸೋಂಕು ತಗುಲಿರುವ ಶಂಕಿತರನ್ನು ಹೇಗೆ ನಿರ್ವಹಣೆ ಮಾಡಬೇಕೆಂದು ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆ ಅನುಸಾರ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ತಪಾಸಣೆ ಕೇಂದ್ರಗಳು, ಆಸ್ಪತ್ರೆಗಳು, ವಿಶೇಷ ವಾರ್ಡ್, ರಕ್ತದ ಮಾದರಿಗಳ ಸಂಗ್ರಹ ವಿಧಾನ, ಪ್ರಯೋಗಾಲಯ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಪಾಲಿಸಬೇಕಾದ ನಿಯಮ ಹಾಗೂ ಮಾನದಂಡವನ್ನು ಸಿದ್ಧಪಡಿಸಿ, ಅಧಿಕಾರಿಗಳು, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ವೈದ್ಯರ ಸಂಘಟನೆಗಳಿಗೆ ಕಳುಹಿಸಲಾಗಿದೆ.

ಕೆಂಪೇಗೌಡ ಅಂತ‌ರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 11,494 ವಿದೇಶ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇವರಲ್ಲಿ ಸೋಂಕು ವರದಿಯಾದ ದೇಶಗಳಿಂದ ಒಟ್ಟು 118 ಪ್ರಯಾಣಿಕರು ಬಂದಿದ್ದು, ಅವರಲ್ಲಿ 114 ಶಂಕಿತರು ನಗರದ ವಿವಿಧೆಡೆ ಮನೆಗಳಲ್ಲಿ ನೆಲೆಸಿದ್ದಾರೆ. 93 ಶಂಕಿತರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 68 ಮಂದಿಗೆ ಸೋಂಕು ತಗುಲಿಲ್ಲ ಎಂದು ವರದಿ ಬಂದಿದೆ. ಇನ್ನುಳಿದವರ ವರದಿ ಇನ್ನೂ ಬಂದಿಲ್ಲ. 

ಮೆಟ್ರೊ ನಿಲ್ದಾಣಗಳಲ್ಲಿ ಜಾಗೃತಿ: ಕೊರೊನಾ ಬಗ್ಗೆ ನಗರದ ಮೆಟ್ರೊ ನಿಲ್ದಾಣಗಳಲ್ಲಿಯೂ ಜಾಗೃತಿ ಮೂಡಿಸಲಾಗುತ್ತಿದೆ. ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹಾಗೂ ಈ ಸೋಂಕಿನ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಬಯಸುವವರು ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡುವಂತೆ ಡಿಜಿಟಲ್ ಫಲಕಗಳ ಮೂಲಕ  ಪ್ರಕಟಣೆ ನೀಡಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು