ಶನಿವಾರ, ಜೂಲೈ 11, 2020
25 °C

ಕ್ವಾರಂಟೈನ್ ನಿಯಮ ಉಲ್ಲಂಘನೆ; ಮೂವರ ವಿರುದ್ಧ ಕೇಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೊರರಾಜ್ಯದಿಂದ ಆಗಮಿಸಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದ ಆರೋಪದಡಿ ಮೂವರ ವಿರುದ್ಧ ಬೇಗೂರು ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

‘ಗಾರೆಬಾವಿಪಾಳ್ಯ ನಿವಾಸಿ‌ಗಳಾದ ಮೂವರು, ಇತ್ತೀಚೆಗಷ್ಟೇ ಹೊರರಾಜ್ಯದಿಂದ ಬಂದಿದ್ದರು. ಬಿಬಿಎಂಪಿ ಸಿಬ್ಬಂದಿ ಅವರ ಕೈಗೆ ಸೀಲ್‌ ಹಾಕಿ ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಿದ್ದರು. ಆದರೆ, ಮೂವರು ಮನೆಯಿಂದ ಹೊರಗೆ ಓಡಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಮೂವರ ವರ್ತನೆಯಿಂದ ಸ್ಥಳೀಯರಲ್ಲಿ ಭಯ ಶುರುವಾಗಿತ್ತು. ಅವರೇ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅಧಿಕಾರಿಗಳು ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿದೆ. ಅಧಿಕಾರಿಗಳು ನೀಡಿರುವ ದೂರು ಆಧರಿಸಿ ಮೂವರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ತಿಳಿಸಿದರು.

‘ಮೂವರು ಸದ್ಯ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಅದರ ಅವಧಿ ಮುಗಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು