ಬೆಂಗಳೂರು: ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಆಸ್ತಿ ವಿವರ ಘೋಷಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಆದೇಶಿಸಿದ್ದರೂ ಬೆಂಗಳೂರು ಮಹಾನಗರ ಪಾಲಿಕೆಯ ಸುಮಾರು 55 ಸದಸ್ಯರು ತಮ್ಮ ಆಸ್ತಿ ವಿವರ ಘೋಷಣೆ ಮಾಡಿಲ್ಲ.

ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು ಎಂದು ಕಳೆದ ಜುಲೈ 28ರಂದು ಲೋಕಾಯುಕ್ತರು ಆದೇಶಿಸಿದ್ದರು. ಆಸ್ತಿ ವಿವರಗಳನ್ನು ಘೋಷಣೆ ಮಾಡಲು ಸೆಪ್ಟೆಂಬರ್ 26ರವರೆಗೆ ಗಡುವು ನೀಡಿದ್ದರು. ಆದರೆ, ಪಾಲಿಕೆಯ 143 ಸದಸ್ಯರು ಮಾತ್ರ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ.

ಕೆಲವು ಮಾಜಿ ಮೇಯರ್ಗಳೂ ಸೇರಿದಂತೆ 46 ಸದಸ್ಯರು ಆಸ್ತಿ ವಿವರ ಘೋಷಣೆ ಮಾಡಿಲ್ಲ. ಆಸ್ತಿ ವಿವರ ಸಲ್ಲಿಸದ ಸದಸ್ಯರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎಚ್.ಎಂ. ವೆಂಕಟೇಶ್ ಮನವಿ ಮಾಡಿದ್ದಾರೆ. ವೆಂಕಟೇಶ್ ಅವರು ಸಲ್ಲಿಸಿದ್ದ ಅರ್ಜಿಯ ಮೇಲೆ ವಿಶ್ವನಾಥ ಶೆಟ್ಟಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳೂ ಆಸ್ತಿ ವಿವರಗಳನ್ನು ಸಲ್ಲಿಸಬೇಕೆಂದು ಆದೇಶಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.