ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್‌ ಚುನಾವಣೆ: ಶಾಂತಿಯುತ ಮತದಾನ

Last Updated 28 ಅಕ್ಟೋಬರ್ 2020, 18:34 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿತ್ತು. 2014 ಚುನಾವಣೆಗೆ ಹೋಲಿಸಿದರೆ ಮತದಾನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ.

ಬೆಳಿಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 5ಕ್ಕೆ ಮುಕ್ತಾಯ ಗೊಂಡಿತು. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಶೇ 70.11, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶೇ 74.84, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ73.32 ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ
ಶೇ 66.28ರಷ್ಟು ಮತದಾನವಾಗಿದೆ.

2014 ರ ಚುನಾವಣೆಯಲ್ಲಿ ಪಶ್ಚಿಮ ಪದವಿಧರ ಕ್ಷೇತ್ರದಲ್ಲಿ ಶೇ 49.48, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶೇ 52.25, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 60.30 ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಶೇ 44.91 ರಷ್ಟು ಮತದಾನವಾಗಿತ್ತು. ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿದರೆ, ಮತದಾನ ಶಾಂತಿ ಯುತವಾಗಿತ್ತು. ಉತ್ತರಕನ್ನಡ ಜಿಲ್ಲೆ ಅಂಕೋಲಾದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಮತಗಟ್ಟೆಯಲ್ಲಿ ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸುತ್ತಿ
ದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಮತ್ತು ಅವರ ಬೆಂಬಲಿಗರು ಗುಂಪು ಗುಂಪಾಗಿ ಚುನಾವಣೆ ಕೇಂದ್ರದ ಆವರಣಕ್ಕೆ ಬಂದರೂ ಏನೂ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದರು.

ರಾಯಚೂರು ನಗರದ ಬಾಲಕಿಯರ ಪಿಯು ಕಾಲೇಜು ಮತಗಟ್ಟೆಯಲ್ಲಿ ಚುನಾವಣಾ ಸಿಬ್ಬಂದಿ ಪಿಪಿಇ ಧರಿಸಿದ್ದನ್ನು ನೋಡಿ ಮತದಾರರು ಮತ ಚಲಾಯಿಸಲು ಹಿಂದೇಟು ಹಾಕಿದ ಘಟನೆಯೂ ನಡೆದಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪಿಪಿಇ ಧರಿಸಿಯೇ ಚುನಾವಣಾ ಪ್ರಕ್ರಿಯೆ ನಡೆಸಿದರು.

ಮತ ಎಣಿಕೆ ನ. 2ರಂದು ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT