ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ನೆರೆ ಮನೆ ದಂಪತಿ ಸರಸದ ಕಿರಿಕಿರಿ; ದೂರು ದಾಖಲು

Published 20 ಮಾರ್ಚ್ 2024, 19:30 IST
Last Updated 20 ಮಾರ್ಚ್ 2024, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಪಕ್ಕದ ಮನೆ ದಂಪತಿ ಮಲಗುವ ಕೋಣೆಯ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುತ್ತಿದ್ದು, ಇದರಿಂದ ತಮಗೆ ತುಂಬಾ ಕಿರಿಕಿರಿಯಾಗುತ್ತಿದೆ’ ಎಂಬ ದೂರೊಂದು ಗಿರಿನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಆವಲಹಳ್ಳಿ ಬಿಡಿಎ ಲೇಔಟ್‌ನ 44 ವರ್ಷದ ಮಹಿಳೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಕೊಂಡಿದ್ದಾರೆ.

ದೂರಿನಲ್ಲಿ ಏನಿದೆ?

‘ಪಕ್ಕದ ಮನೆಯ ಎರಡನೇ ಮಹಡಿಯಲ್ಲಿ ದಂಪತಿ ನೆಲೆಸಿದ್ದಾರೆ. ನಮ್ಮ ಮನೆಯ ಎದುರಿಗೇ ಅವರ ಮಲಗುವ ಕೋಣೆಯಿದ್ದು, ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗಿರುತ್ತಾರೆ. ಕಿಟಕಿ ಹಾಕಿಕೊಳ್ಳುವಂತೆ ದಂಪತಿಯಲ್ಲಿ ಮನವಿ ಮಾಡಿದ್ದೆವು. ಆದರೆ, ಅವರು ನಮ್ಮ ಕುಟುಂಬದ ಸದಸ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅತ್ಯಾಚಾರ ಎಸಗುವ ಹಾಗೂ ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ. ದಂಪತಿಯೊಂದಿಗೆ ಮನೆ ಮಾಲೀಕರೂ ಸೇರಿಕೊಂಡು ಹಲ್ಲೆಗೆ ಯತ್ನಿಸಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT