ಚಂದಾಪುರ(ಆನೇಕಲ್): ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲ್ಲೂಕಿನ ಹೀಲಲಿಗೆ ಗ್ರಾಮದ ಬಾಡಿಗೆ ಮನೆಯಲ್ಲಿ ನೆಲಸಿದ್ದ ಒಡಿಶಾ ಮೂಲದ ಕಾರ್ಮಿಕ ದಂಪತಿ ದೀಪಾಂತ ಸಬರ (31) ಹಾಗೂ ಮಂಜುಳಾ (27) ಶುಕ್ರವಾರ ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.

ಬೊಮ್ಮಸಂದ್ರ ಖಾಸಗಿ ಕಂಪನಿಯಲ್ಲಿ ದಂಪತಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿತ್ತು. ಇದರಿಂದ ನೊಂದ ಮಂಜುಳಾ ಶುಕ್ರವಾರ ತಡರಾತ್ರಿ 1ರ ವೇಳೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಕಂಡ ಪತಿ ದೀಪಾಂತ ಕೂಡ ನೇಣಿಗೆ ಶರಣಾಗಿದ್ದಾರೆ. ಈ ಮಾಹಿತಿಯನ್ನು ಡೇತ್ ನೋಟ್ನಲ್ಲಿ ದೀಪಾಂತ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.