ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಲಯದ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶ, ಗುರುತಿನ ಚೀಟಿ ಸೃಷ್ಟಿ

Published 2 ಜುಲೈ 2023, 14:15 IST
Last Updated 2 ಜುಲೈ 2023, 14:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶ ಹಾಗೂ ನಕಲಿ ಗುರುತಿನ ಚೀಟಿ ಸೃಷ್ಟಿಸಲಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ನ್ಯಾಯಾಲಯದ ಶಾಖಾಧಿಕಾರಿ ದೂರು ನೀಡಿದ್ದಾರೆ. ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಸಹಾಯಕ ಕೆಲಸ ಮಾಡಿದ್ದ ರಾಜೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ನ್ಯಾಯಾಲಯದಲ್ಲಿ ಚಾಲಕ ಹುದ್ದೆ ಕೊಡಿಸುವುದಾಗಿ ಮಧು ಎಂಬಾತನಿಗೆ ಆರೋಪಿ ರಾಜೇಶ್ ಹೇಳಿದ್ದ. ನಂತರ, ನಕಲಿ ನೇಮಕಾತಿ ಆದೇಶ ಹಾಗೂ ಗುರುತಿನ ಚೀಟಿಗಳನ್ನು ಸೃಷ್ಟಿಸಿ ಮಧುಗೆ ನೀಡಿದ್ದ. ಈ ಸಂಗತಿ ಗಮನಕ್ಕೆ ಬರುತ್ತಿದ್ದಂತೆ ಶಾಖಾಧಿಕಾರಿ ದೂರು ನೀಡಿದ್ದಾರೆ.’

‘ಆರೋಪಿ ರಾಜೇಶ್, ಮಧು ಅವರಿಗೆ ಕೆಲಸದ ಆಮಿಷವೊಡ್ಡಿ ಹಣ ಪಡೆದಿರುವ ಮಾಹಿತಿ ಇದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT