ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರವಲು ಸೇವೆಯಿಂದ ಮಾತೃ ಇಲಾಖೆಗೆ ವರ್ಸಿ

Last Updated 27 ನವೆಂಬರ್ 2019, 10:22 IST
ಅಕ್ಷರ ಗಾತ್ರ

ಬೆಂಗಳೂರು: ಮಲ್ಲೇಶ್ವರ, ಗಾಂಧಿ ನಗರ ಮತ್ತು ರಾಜರಾಜೇಶ್ವರಿನಗರ ವಿಭಾಗಗಳಲ್ಲಿ ನಡೆದಿದ್ದ ಅಕ್ರಮ ಕಾಮಗಾರಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 25 ಎಂಜಿನಿಯರ್‌ಗಳನ್ನು ಎರವಲು ಸೇವೆಯಿಂದ ಮಾತೃ ಇಲಾಖೆಗೆ ವರ್ಗಾವಣೆ ಮಾಡಿದಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶಕ್ಕೆ, ಕರ್ನಾಟಕ ಆಡಳಿತ ನ್ಯಾಯಮಂಡಳಿ (ಸಿಎಟಿ) ಮಧ್ಯಂತರ ತಡೆ ನೀಡಿದೆ.

ಬಿಬಿಎಂಪಿ ಆದೇಶ ಪ್ರಶ್ನಿಸಿ ಸಹಾಯಕ ಎಂಜಿನಿಯರ್‌ಗಳಾದ ಎಂ.ಕೆ.ಹರೀಶ್ ಮತ್ತು ಎಸ್.ಶಿವಮಲ್ಲು ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ ತಡೆ ನೀಡಿದೆ. ಪ್ರತಿವಾದಿ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT