ಬೆಂಗಳೂರು: ಹೈಕೋರ್ಟ್ ಆದೇಶದಂತೆ ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಮತ್ತು ಸ್ನಾತಕ ಪದವಿಗಳ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಸಿ. ಶ್ರೀನಿವಾಸ್ ತಿಳಿಸಿದ್ದಾರೆ.

ಬಿ.ಕಾಂ ಮತ್ತು ಸ್ನಾತಕ ಪದವಿಗಳ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಲು ಮಧ್ಯಂತರ ಆದೇಶ ನೀಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈಕೋರ್ಟ್ ಆದೇಶದಂತೆ ಬಿ.ಕಾಂ ಮತ್ತು ಸ್ನಾತಕ ಪದವಿಗಳ 1, 3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳು ಮತ್ತು ಮುಂದಿನ ಎಲ್ಲಾ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಪರೀಕ್ಷೆಗಳಿಗೆ ಹಾಜರಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.