ಶನಿವಾರ, ಫೆಬ್ರವರಿ 4, 2023
18 °C
ಮಹದೇವಪುರ: ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ್ದ ಆರೋಪ

ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿ ಆರೋಪ: ಎಫ್‌ಐಆರ್ ರದ್ದತಿಗೆ ಕೋರ್ಟ್ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅಧಿಕಾರಿಗಳಿಗೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿ ಸಿದಂತೆ ನಗರದ ಅಪಾರ್ಟ್‌ಮೆಂಟ್‌ ನಿವಾಸಿಗಳ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

‘ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಮಹದೇಪುರದ ‘ಶಿಲ್ಪಿತಾ ಸ್ಪ್ಲೆಂಡರ್ ಅನೆಕ್ಸ್’ ಅಪಾರ್ಟ್‌ ಮೆಂಟ್‌ನ 23 ಫ್ಲ್ಯಾಟ್‌ ನಿವಾಸಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ವಜಾಗೊಳಿಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದ ಫೋಟೊ ಮತ್ತು ವಿಡಿಯೊ ದೃಶ್ಯವಾಳಿ ಗಮನಿಸಿ ದಾಗ ಅರ್ಜಿದಾರರು ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಸರ್ಕಾರಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವ ಉದ್ದೇಶದಿಂದ ಇವರೆಲ್ಲಾ ಒಟ್ಟಾಗಿ ದ್ದಾರೆ.

ಇದು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 149 (ಅಕ್ರಮ ಕೂಟ ರಚನೆ) ಮತ್ತು ಕಲಂ 143ರ (ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ) ಅಡಿಯಲ್ಲಿ ಅಪರಾಧವಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಕರಣವೇನು?: ಮಹದೇವಪುರ ಗ್ರಾಮದ ಸರ್ವೇ ನಂ. 151/1 ಮತ್ತು 151/4 ಮತ್ತು 119ರಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ ಜಾಗ ತೆರವುಗೊಳಿಸುವಂತೆ 2020ರ ಜನವರಿ 16ರಂದು ಹೈಕೋರ್ಟ್ ಆದೇಶಿಸಿತ್ತು. ಇದರ ಅನುಸಾರ ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಮಾಲತಿ 2020ರ ಮಾರ್ಚ್ 31ರಂದು ಒತ್ತುವರಿ ಜಾಗದ ಸರ್ವೇ ನಡೆಸಲು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ದ್ದರು. ಆಗ ಅಪಾರ್ಟ್‌ಮೆಂಟ್‌ ನಿವಾಸಿ ಗಳು ಒಟ್ಟುಗೂಡಿ ಪ್ರತಿಭಟನೆ ನಡೆಸಿದ್ದರು. 

ಈ ಕುರಿತು ಮಾಲತಿ ಮಹದೇವಪುರ ಠಾಣೆಗೆ ದೂರು ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು