ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪ: ಉದಯನಿಧಿ ಸ್ಟಾಲಿನ್‌ಗೆ ಸಮನ್ಸ್‌

Published 4 ಮಾರ್ಚ್ 2024, 16:11 IST
Last Updated 4 ಮಾರ್ಚ್ 2024, 16:11 IST
ಅಕ್ಷರ ಗಾತ್ರ

ಬೆಂಗಳೂರು: ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಸಮನ್ಸ್‌ ಜಾರಿ ಮಾಡಿ ಸೋಮವಾರ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ.

ಸಚಿವ ಉದಯನಿಧಿ ಸ್ಟಾಲಿನ್‌ ಸೇರಿ ನಾಲ್ವರ ವಿರುದ್ಧ ದಾಖಲಿಸಿಲಾಗಿರುವ ಕ್ರಿಮಿನಲ್‌ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ (ಮ್ಯಾಜಿಸ್ಟ್ರೇಟ್) ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಅವರು ನಡೆಸಿದರು.

ತಮಿಳುನಾಡಿನ ಬರಹಗಾರರೂ ಆಗಿರುವ ಎರಡನೇ ಆರೋಪಿ ಎಸ್‌. ವೆಂಕಟೇಶ್, ತಮಿಳುನಾಡಿನ ಪ್ರಗತಿಪರ ಬರಹಗಾರರು ಮತ್ತು ಕಲಾವಿದರ ಸಂಘದ ರಾಜ್ಯಾಧ್ಯಕ್ಷ ಮೂರನೇ ಆರೋಪಿ ಮಧುಕರ್‌ ರಾಮಲಿಂಗಂ ಮತ್ತು ಸಂಘದ ಕಾರ್ಯದರ್ಶಿ ಹಾಗೂ ನಾಲ್ಕನೇ ಆರೋಪಿ ಆದವನ್‌ ಡಿಚನ್ಯ ಅವರಿಗೆ ಖುದ್ದು ಹಾಜರಾಗಲು ಆದೇಶಿಸಿರುವ ನ್ಯಾಯಾಲಯವು, ಮೊದಲ ಆರೋಪಿ ತಮಿಳುನಾಡಿನ ಯುವ ಜನ ಕ್ಷೇಮಾಭಿವೃದ್ಧಿ, ಕ್ರೀಡೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್‌ ಅವರಿಗೆ ವ್ಯಾಪ್ತಿ ಹೊಂದಿದ ಪೊಲೀಸ್‌ ಠಾಣೆಯ ಮೂಲಕ ಸಮನ್ಸ್‌ ಜಾರಿ ಮಾಡಲು ಆದೇಶಿಸಿದ್ದು, ವಿಚಾರಣೆಯನ್ನು ಏಪ್ರಿಲ್ 26ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: 2023ರ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಸನಾತನ ಧರ್ಮವನ್ನು ಡೆಂಗಿ, ಮಲೇರಿಯಾ ಹಾಗೂ ಕೊರೊನಾಕ್ಕೆ ಹೋಲಿಕೆ ಮಾಡಿ ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT