ಬುಧವಾರ, ಮಾರ್ಚ್ 22, 2023
19 °C

ಲಂಚ ಪಡೆದ ಆರೋಪ: ಬಿಎಸ್‌ವೈ ವಿರುದ್ಧದ ದೂರು ಇಂದು ಭವಿಷ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗುತ್ತಿಗೆದಾರ ಚಂದ್ರಕಾಂತ್‌ ರಾಮಲಿಂಗಂ ಬಳಿ ₹ 12.5 ಕೋಟಿ ಲಂಚ ಪಡೆದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಅವರ ಮಗ ಬಿ.ವೈ. ವಿಜಯೇಂದ್ರ ಮತ್ತು ಇತರರ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವ ಕುರಿತು ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸಲಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕೆ? ಬೇಡವೆ? ಎಂಬುದರ ಕುರಿತು ಜೂನ್‌ 30ರಂದು ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಧೀಶ ಬಿ. ಜಯಂತ್‌ ಕುಮಾರ್‌, ಆದೇಶ ಕಾಯ್ದಿರಿಸಿದ್ದರು. ಗುರುವಾರ ನ್ಯಾಯಾಲಯ ಆದೇಶ ಪ್ರಕಟಿಸಲಿದ್ದು, ಪ್ರಕರಣದ ಭವಿಷ್ಯ ನಿರ್ಧಾರವಾಗಲಿದೆ.

ಯಡಿಯೂರಪ್ಪ, ವಿಜಯೇಂದ್ರ ಅವರ ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯ್‌ ಶ್ರೀ, ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ, ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಮೈಸೂರು ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ. ಪ್ರಕಾಶ್, 37 ಕ್ರೆಸೆಂಟ್ ಹೋಟೆಲ್‌ ಮಾಲೀಕ ಕೆ. ರವಿ ಮತ್ತು ವಿರೂಪಾಕ್ಷ‍ಪ್ಪ ಯಮಕನಮರಡಿ ಅವರನ್ನು ಆರೋಪಿಗಳೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು