ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ರಾಜ್ಯದಲ್ಲಿ 148 ಪ್ರಕರಣ ಪತ್ತೆ

Published 2 ಜನವರಿ 2024, 16:23 IST
Last Updated 2 ಜನವರಿ 2024, 16:23 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 148 ಕೋವಿಡ್ ಪ್ರಕರಣಗಳು ಹೊಸದಾಗಿ ದೃಢಪಟ್ಟಿವೆ. ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು 1,144 ಸಕ್ರಿಯ ಪ್ರಕರಣಗಳಿವೆ.

24 ಗಂಟೆಗಳ ಅವಧಿಯಲ್ಲಿ 7,305 ಪರೀಕ್ಷೆ ನಡೆಸಲಾಗಿತ್ತು. ಶೇ 2.02ರಷ್ಟು ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

1,144 ಸಕ್ರಿಯ ಪ್ರಕರಣಗಳಲ್ಲಿ 1,089 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. 55 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 23 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 248 ಮಂದಿ ಚೇತರಿಸಿಕೊಂಡಿದ್ದಾರೆ.

ಈವರೆಗೆ ರಾಜ್ಯದಲ್ಲಿ 601 ಮಾದರಿಗಳನ್ನು ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆ (ಜಿನೋಮಿಕ್ ಸಿಕ್ವೆನ್ಸೀಸ್‌) ಪರೀಕ್ಷೆಗೆ ಕಳುಹಿಸಲಾಗಿದೆ. ಅವುಗಳಲ್ಲಿ ಈವರೆಗೆ 262 ಮಾದರಿಗಳ ಫಲಿತಾಂಶ ಬಂದಿದೆ. ಇವುಗಳಲ್ಲಿ 199 ಮಾದರಿಗಳಲ್ಲಿ ಜೆಎನ್‌.1, 28 ಮಾದರಿಗಳಲ್ಲಿ ಎಕ್ಸ್‌ಬಿಬಿ  ಹಾಗೂ 35 ಮಾದರಿಗಳಲ್ಲಿ ಕೊರೊನಾ ವೈರಾಣುವಿನ ಇತರ ರೂಪಾಂತರಿ ತಳಿಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT