ಶುಕ್ರವಾರ, ಆಗಸ್ಟ್ 14, 2020
27 °C

ಚಿಕಿತ್ಸೆ ಸಿಗದೆ ಅಬಕಾರಿ ನೌಕರ ಸಾವು

‍ಪ್ರಜಾವಾಣಿ ವಾರ್ತೆ‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಡಿ ಅಬಕಾರಿ ಇಲಾಖೆಯ ನೌಕರರೊಬ್ಬರು ಬುಧವಾರ ಮೃತಪಟ್ಟಿದ್ದಾರೆ.

ಕೆಮ್ಮಿನಿಂದ ಬಳಲುತ್ತಿದ್ದ ಅಬಕಾರಿ ಇಲಾಖೆಯ 58 ವರ್ಷದ ನೌಕರ ಮನೆಯಲ್ಲೇ ಕುಸಿದು ಬಿದ್ದಿದ್ದರು. ಖಾಸಗಿ ಆಸ್ಪತ್ರೆಯೊಂದಕ್ಕೆ ಕುಟುಂಬದವರು ಕರೆದೊಯ್ದಿದ್ದರು.‌ ಹಾಸಿಗೆ ಖಾಲಿ ಇಲ್ಲದ ಕಾರಣ ಪ್ರವೇಶ ಸಿಗಲಿಲ್ಲ. ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ ವಿಚಾರಣೆ ನಡೆಸಿ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

‘ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ದೊರೆತಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು’ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.

5 ದಿನಗಳ ಬಳಿಕ ಅಂತ್ಯಕ್ರಿಯೆ: ‍ಪುಲಕೇಶಿನಗರದ ಮಹಿಳೆಯೊಬ್ಬರು ಮೃತಪಟ್ಟು 5 ದಿನಗಳ ಬಳಿಕ ಬುಧವಾರ ಅಂತ್ಯ ಸಂಸ್ಕಾರ ನಡೆಸಲಾಗಿದೆ. ಕೋವಿಡ್ ಪರೀಕ್ಷಾ ವರದಿ ಬರುವುದು ವಿಳಂಬವಾದ ಕಾರಣ ಶವಾಗಾರದಲ್ಲಿ ಮೃತದೇಹ ಇರಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು