ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Updates | ರಾಜ್ಯದಲ್ಲಿ ಸಕ್ರಿಯ ಪ್ರಕರಣ ಏರಿಕೆ

Published 24 ಡಿಸೆಂಬರ್ 2023, 14:12 IST
Last Updated 24 ಡಿಸೆಂಬರ್ 2023, 14:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 106 ಕೋವಿಡ್ ಪ್ರಕರಣಗಳು ಭಾನುವಾರ ದೃಢಪಟ್ಟಿವೆ. ಇದರಿಂದಾಗಿ ಸಕ್ರಿಯ ಪ್ರಕರಣಗಳು 344ಕ್ಕೆ ಏರಿಕೆಯಾಗಿವೆ. 

24 ಗಂಟೆಗಳಲ್ಲಿ 1,441 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 7.35ರಷ್ಟು ವರದಿಯಾಗಿದೆ. ಸಕ್ರಿಯ ಪ್ರಕರಣಗಳಲ್ಲಿ 323 ಮಂದಿ ಮನೆ ಆರೈಕೆಗೆ ಒಳಗಾದರೆ, 21 ಮಂದಿ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 7 ಮಂದಿಗೆ ತೀವ್ರ ನಿಗಾ ಘಟಕ ಹಾಗೂ 14 ಮಂದಿಗೆ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. 

ಬೆಂಗಳೂರಿನಲ್ಲಿ ಒಂದು ದಿನದಲ್ಲಿ 899 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, 95 ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 297 ಕ್ಕೆ ಏರಿಕೆಯಾಗಿದೆ. ಹೊಸದಾಗಿ ಮೈಸೂರಿನಲ್ಲಿ ಆರು, ದಕ್ಷಿಣ ಕನ್ನಡದಲ್ಲಿ ಎರಡು, ಚಾಮರಾಜನಗರ, ಮಂಡ್ಯ ಹಾಗೂ ಶಿವಮೊಗ್ಗದಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT