ಗುರುವಾರ , ಜೂನ್ 4, 2020
27 °C

ಗರ್ಭಿಣಿಗೂ ಕೋವಿಡ್–19 ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕು ತಿಂಗಳ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಡ್ಡಿದ್ದು, ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

‘ನಾವು ಕೊರೊನಾ ಸೋಂಕಿಗೆ ಸಲಹೆ ನೀಡುವುದಿಲ್ಲ. ಯಾವುದೇ ಸೋಂಕಿತ ವ್ಯಕ್ತಿ ನಮ್ಮ ಆಸ್ಪತ್ರೆಯನ್ನು ಸಂಪರ್ಕಿಸಿಲ್ಲ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲ ರೋಗಿಗಳ ಮಾದರಿಯಲ್ಲಿಯೇ ಅವರಿಗೂ ಚಿಕಿತ್ಗ ನೀಡಲಾಗುತ್ತಿದೆ’ ಎಂದು ವಾಣಿವಿಲಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಗೀತಾ ಶಿವಮೂರ್ತಿ ತಿಳಿಸಿದರು. 

ಸ್ತ್ರೀರೋಗ ತಜ್ಷೆ ಡಾ. ಪ್ರತಿಮಾ ರೆಡ್ಡಿ, ‘ನಾಲ್ಕು ತಿಂಗಳ ಗರ್ಭಿಣಿ ಆಗಿದ್ದರಿಂದ ಜನಿಸುವ ಮಗುವಿಗೆ ಸಮಸ್ಯೆಯಾಗುವುದಿಲ್ಲ. ಆದರೆ, ಈ ಬಗ್ಗೆ ಹೆಚ್ಚಿನ ಪುರಾವೆಗಳು ಲಭ್ಯವಿಲ್ಲ. ಚೀನಾದಲ್ಲಿ ಮಾತ್ರ ಈ ಬಗ್ಗೆ ಅಧ್ಯಯನಗಳು ನಡೆದಿದೆ. ಇದು ಹೊಸ ರೋಗವಾದ್ದರಿಂದ ಕಾಯಬೇಕಾಗಿದೆ. ಮಗು ಜನಿಸಿದ ಬಳಿಕವೇ ಎಲ್ಲ ಪರೀಕ್ಷೆಗಳನ್ನು ಮಾಡಬೇಕು’ ಎಂದರು. 

ಡಾ.ಹೇಮಾ ದಿವಾಕರ್, ‘ಗರ್ಭಾವಸ್ಥೆ ಪೂರ್ಣಗೊಳ್ಳುವ ಹೊತ್ತಿಗೆ ಅವರು ಆರೋಗ್ಯವಾಗುತ್ತಾರೆ. ಮಗುವಿನ ಆರೋಗ್ಯದ ಮೇಲಾಗುವ ಪರಿಣಾಮದ ಬಗ್ಗೆ ಹೆಚ್ಚಿನ ಅಧ್ಯಯನ ನಡೆಯಬೇಕು’ ಎಂದು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು